ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚನೆ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಕರೆತರಲು ತನಿಖಾ ಸಂಸ್ಥೆಗಳ ಅಧಿಕಾರಿಗಳನ್ನು ಒಳಗೊಂಡ ಸಿಬಿಐ ಡಿಐಜಿ ನೇತೃತ್ವದ ತಂಡವು ಡೊಮಿನಿಕಾಗೆ ತೆರಳಿದೆ.

ಅಲ್ಲಿನ ನ್ಯಾಯಾಲಯವು ಗಡಿಪಾರು ಮಾಡಲು ಅವಕಾಶ ನೀಡಿದರೆ, ಭಾರತದ ತಂಡವು ಬಂಧಿತ ಚೋಕ್ಸಿಯನ್ನು ಭಾರತಕ್ಕೆ ಕರೆತರಲಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಡೊಮಿನಿಕಾದ ಹೈಕೋರ್ಟ್ನಲ್ಲಿ ಚೋಕ್ಸಿ ಪ್ರಕರಣದ ವಿಚಾರಣೆಯು ಬುಧವಾರ ನಡೆಯಲಿದೆ (ಸ್ಥಳೀಯ ಕಾಲಮಾನ). ಸಿಬಿಐನ ಇಬ್ಬರು ಅಧಿಕಾರಿಗಳು ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳ ಅಧಿಕಾರಿಗಳು ಡೊಮಿನಿಕಾ ತಲುಪಿದ್ದಾರೆ.

2018ರಿಂದ ಆಂಟಿಗುವಾ ಮತ್ತು ಬಾರ್ಬುಡಾ ಪ್ರಜೆಯಾಗಿ ನೆಲೆಸಿರುವ ಚೋಕ್ಸಿ, ಮೇ 23ರಂದು ಅಲ್ಲಿಂದ ನಿಗೂಢವಾಗಿ ನಾಪತ್ತೆಯಾಗಿದ್ದರು. ಬಾರ್ಬುಡಾದ ಪಕ್ಕದ ಡೊಮಿನಿಕಾಗೆ ಅಕ್ರಮ ಪ್ರವೇಶ ಪಡೆದ ಕಾರಣ ಅವರನ್ನು ಬಂಧಿಸಲಾಗಿತ್ತು.

₹ 13,500 ಕೋಟಿ ಮೊತ್ತದ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಚೋಕ್ಸಿ ಭಾರತದಿಂದ ತಲೆಮರೆಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.