ಮುಂಬೈ: ನಗರದ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್– 2 ಅನ್ನು ಸ್ಫೋಟಿಸುವುದಾಗಿ ಅಪರಿಚಿತ ವ್ಯಕ್ತಿ ಇ–ಮೇಲ್ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ಬೆಳಿಗ್ಗೆ ಇ–ಮೇಲ್ ಬಂದಿದ್ದು, ಸ್ಫೋಟ ತಡೆಯಬೇಕಿದ್ದರೆ ಮುಂದಿನ 48 ಗಂಟೆಗಳಲ್ಲಿ ಬಿಟ್‌ಕಾಯಿನ್‌ನಲ್ಲಿ ಒಂದು ಮಿಲಿಯನ್ ಡಾಲರ್ ನೀಡುವಂತೆ ಆರೋಪಿ ಬೇಡಿಕೆಯಿಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮುಂಬೈ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ (ಎಂಐಎಎಲ್) ದಾಖಲಿಸಿದ ದೂರಿನ ಅನ್ವಯ ಐಪಿಸಿ ಸೆಕ್ಷನ್ 385 ಮತ್ತು 505 (1) (b) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
.ಮುಕೇಶ್ ಅಂಬಾನಿಗೆ 3ನೇ ಬಾರಿ ಬೆದರಿಕೆ ಇ– ಮೇಲ್: ₹400 ಕೋಟಿ ಹಣಕ್ಕೆ ಬೇಡಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.