ಮುಂಬೈ: ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಬಂಧಿಯಾಗಿರುವ ಉದ್ಯಮಿ, ನಟಿ ಶಿಲ್ಪಾ ಶೆಟ್ಟಿ ಅವರ ಪಟ್ಟಿ ರಾಜ್ ಕುಂದ್ರಾ ಅವರಿಗೆ ಮುಂಬೈ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.

ರಾಜ್ ಕುಂದ್ರಾ ಅವರ ಜೊತೆಗೇ ಪ್ರಕರಣದಲ್ಲಿ ಆರೋಪಿಯಾಗಿದ್ದ ರಿಯಾನ್‌ಥ್ರೋಪೆ ಅವರಿಗೂ ನ್ಯಾಯಾಲಯ ಜಾಮೀನು ನೀಡಿದೆ.

ಜಾಮೀನು ಪಡೆಯಲು ರಾಜ್ ಕುಂದ್ರಾ ಅವರು ₹50 ಸಾವಿರ ಭದ್ರತೆ ಒದಗಿಸಬೇಕು ಎಂದು ಕೋರ್ಟ್ ತಿಳಿಸಿದೆ. ಈ ಕುರಿತು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಮತ್ತು ಕೆಲವು ಆ್ಯಪ್‌ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪದ ಮೇಲೆ ರಾಜ್‌ಕುಂದ್ರಾ ಅವರನ್ನು ಮುಂಬೈ ಪೊಲೀಸರು ಜುಲೈ 20ರಂದು ಬಂಧಿಸಿದ್ದರು.

ಇತ್ತೀಚೆಗೆ ಅವರ ವಿರುದ್ಧ ಪೂರಕಆರೋಪ ಪಟ್ಟಿ ಕೂಡ ಸಲ್ಲಿಕೆಯಾಗಿತ್ತು.

‘ಅಶ್ಲೀಲ ಚಿತ್ರ ನಿರ್ಮಾಣ ಆರೋಪಗಳಿಗೆ ಸಂಬಂಧಿಸಿ ಸಲ್ಲಿಸಲಾಗಿರುವ ಪೂರಕ ದೋಷಾರೋಪ ಪಟ್ಟಿಯಲ್ಲಿ ನನ್ನ ವಿರುದ್ಧ ಒಂದೂ ಸಾಕ್ಷ್ಯ ಇಲ್ಲ. ಹೀಗಾಗಿ ಜಾಮೀನು ನೀಡಬೇಕು’ ಎಂದು ಕೋರಿ ಉದ್ಯಮಿ ರಾಜ್ ಕುಂದ್ರಾ ಮುಂಬೈ ಕೋರ್ಟ್‌ಗೆ ಕಳೆದ ಶನಿವಾರವಷ್ಟೇ ಅರ್ಜಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.