ಮಂಬೈ : ಇಲ್ಲಿನ ಫಿಲ್ಮ್ ಸಿಟಿಯಲ್ಲಿ ಶುಕ್ರವಾರ ಮಧ್ಯಾಹ್ನ ಟಿವಿ ಧಾರಾವಾಹಿ ‘ಗುಮ್ ಹೈ ಕಿಸಿಕೇ ಪ್ಯಾರ್ ಮೈನ್’ ಸೆಟ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಬೃಹನ್‌ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಧಾರಾವಾಹಿಯ ಚಿತ್ರೀಕರಣ ನಡೆಯುತ್ತಿದ್ದ ಸ್ಟುಡಿಯೊದ 2,000 ಚದರ ಅಡಿ ವಿಸ್ತೀರ್ಣದ ನೆಲ ಮಹಡಿಯಲ್ಲಿ ಸಂಜೆ 4.30ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ಸದ್ಯಕ್ಕೆ ಯಾರೂ ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಸ್ಟುಡಿಯೊದಿಂದ ದಟ್ಟವಾದ ಕಪ್ಪು ಹೊಗೆ ಬರುತ್ತಿತ್ತು. ಕನಿಷ್ಠ 12 ಅಗ್ನಿಶಾಮಕ ವಾಹನ, ಏಳು ನೀರಿನ ಜೆಟ್ಟಿಗಳು, ಒಂದು ನೀರಿನ ಟ್ಯಾಂಕರ್, ಮೂರು ಸ್ವಯಂಚಾಲಿತ ಟರ್ನ್-ಟೇಬಲ್‌ಗಳು (ಎಡಬ್ಲ್ಯುಟಿಟಿ), ಒಂದು ತ್ವರಿತ ಪ್ರತಿಕ್ರಿಯೆ ವಾಹನ ಮತ್ತು ಇತರ ಅಗ್ನಿಶಾಮಕ ದಳದ ವಾಹನಗಳು ಸ್ಥಳದಲ್ಲಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.