ಮುಂಬೈ: ಗುಜರಾತಿಗಳು ಮತ್ತು ರಾಜಸ್ಥಾನಿಗಳು ಇರದೇ ಹೋದರೆ ಮುಂಬೈನಲ್ಲಿ ಹಣವೇ ಇರುವುದಿಲ್ಲ. ದೇಶದ ಆರ್ಥಿಕ ರಾಜಧಾನಿಯಾಗಿಯೂ ಉಳಿಯುವುದಿಲ್ಲ ಎನ್ನುವ ಮೂಲಕ ಮಹಾರಾಷ್ಟ್ರ ರಾಜ್ಯಪಾಲ ಭಗತ್‌ಸಿಂಗ್ ಕೋಶಿಯಾರಿ ಶನಿವಾರ ವಿವಾದ ಸೃಷ್ಟಿ ಮಾಡಿದ್ದಾರೆ.

ರಾಜ್ಯಪಾಲರ ಈ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದ್ದು, ರಾಜ್ಯಪಾಲ ಕೋಶಿಯಾರಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ.

ಮುಂಬೈನ ಪಶ್ಚಿಮ ಉಪನಗರ ಅಂಧೇರಿಯಲ್ಲಿ ವೃತ್ತವೊಂದಕ್ಕೆ ನಾಮಕರಣ ಮಾಡುವ ಸಮಾರಂಭವೊಂದರಲ್ಲಿ ಮಾತನಾಡುತ್ತಿದ್ದ ರಾಜ್ಯಪಾಲ ಕೋಶಿಯಾರಿ, ‘ನಾನು ಇಲ್ಲಿನ ಜನರಿಗೆ ಹೇಳಬಯಸುತ್ತೇನೆ. ಗುಜರಾತಿಗಳು ಮತ್ತು ರಾಜಸ್ಥಾನಿಗಳನ್ನು ಮಹಾರಾಷ್ಟ್ರದಿಂದ, ವಿಶೇಷವಾಗಿ ಮುಂಬೈ ಮತ್ತು ಥಾಣೆಯಿಂದ ಹೊರಹಾಕಿದರೆ ನಿಮ್ಮ ಬಳಿ ಹಣವಿರುವುದಿಲ್ಲ. ಮುಂಬೈ ಆರ್ಥಿಕ ರಾಜಧಾನಿಯಾಗಿ ಉಳಿಯುವುದಿಲ್ಲ’ ಎಂದು ಹೇಳಿದ್ದಾರೆ.

ಮುಂಬೈಯನ್ನು ದೇಶದ ಆರ್ಥಿಕ ರಾಜಧಾನಿಯನ್ನಾಗಿ ಮಾಡುವಲ್ಲಿ ರಾಜಸ್ಥಾನಿ-ಮಾರ್ವಾಡಿ ಮತ್ತು ಗುಜರಾತಿ ಸಮುದಾಯಗಳ ಕೊಡುಗೆಯನ್ನು ಕೋಶಿಯಾರಿ ಶ್ಲಾಘಿಸಿದ್ದಾರೆ ಎಂದು ರಾಜಭವನ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿಯೂ ಹೇಳಲಾಗಿದೆ.

ರಾಜಸ್ಥಾನಿ-ಮಾರ್ವಾಡಿ ಸಮುದಾಯವು ದೇಶದ ವಿವಿಧ ಭಾಗಗಳಲ್ಲಿ ವಾಸಿಸುತ್ತಿದೆ. ನೇಪಾಳ ಮತ್ತು ಮಾರಿಷಸ್‌ನಂತಹ ದೇಶಗಳಲ್ಲೂ ನೆಲೆಸಿದೆ ಎಂದೂ ರಾಜ್ಯಪಾಲರು ಹೇಳಿದರು.

ಈ ಸಮುದಾಯದವರು ಎಲ್ಲಿಗೇ ಹೋದರೂ ವ್ಯಾಪಾರ ಮಾಡುವುದಲ್ಲದೇ ಶಾಲೆ, ಆಸ್ಪತ್ರೆಗಳನ್ನು ಕಟ್ಟುವ ಮೂಲಕ ಪರೋಪಕಾರದ ಕಾರ್ಯಗಳನ್ನು ಮಾಡುತ್ತಾರೆ ಎಂದು ಕೋಶಿಯಾರಿ ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ವಕ್ತಾರ ಅತುಲ್ ಲೋಂಧೆ ಅವರು ರಾಜ್ಯಪಾಲರ ಹೇಳಿಕೆಗಳ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ಮೇಲಿನ ದ್ವೇಷವನ್ನು ಅವರು ಹೊರ ಹಾಕಿದ್ದಾರೆ. ಅಲ್ಲದೆ ರಾಜ್ಯಪಾಲರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇವುಗಳನ್ನೂ ಓದಿ

ದಿಢೀರ್ ಜಾತ್ಯತೀತರಾದಿರೇ: ಸಿಎಂ ಉದ್ಧವ್ ಠಾಕ್ರೆಗೆ ರಾಜ್ಯಪಾಲ ಕೋಶಿಯಾರಿ ಪ್ರಶ್ನೆ

ಸಂವಿಧಾನ ಪಾಲಿಸಲು ರಾಜ್ಯಪಾಲರಿಗೆ ಇಷ್ಟವಿಲ್ಲವೆಂಬುದು ಸಾಬೀತು: ಸಂಜಯ್ ರಾವುತ್

ಸಂವಿಧಾನ, ಪ್ರಧಾನಿ, ರಾಷ್ಟ್ರಪತಿ ಸ್ಥಾನಗಳೂ ಜಾತ್ಯತೀತ: ಶಿವಸೇನೆ ಸಂಸದ ರಾವುತ್

'ಇದು ನಿಮ್ಮ ಹಿಂದುತ್ವವೇ': ಮಹಾರಾಷ್ಟ್ರ ರಾಜ್ಯಪಾಲರಿಗೆ ಉದ್ಧವ್ ಠಾಕ್ರೆ ಪ್ರಶ್ನೆ

'ಶಾಂತಿದೂತ' ನೆಹರುವಿನಿಂದಾಗಿ ಭಾರತಕ್ಕೆ ಪೆಟ್ಟಾಯಿತು: ಮಹಾರಾಷ್ಟ್ರ ರಾಜ್ಯಪಾಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.