ಚೆನ್ನೈ: ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಈಚೆಗೆ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶುಕ್ರವಾರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ವಿರೋಧ ಪಕ್ಷ ಎಐಎಡಿಎಂಕೆ ಮಂಡಿಸಿದ್ದ ಪ್ರಸ್ತಾವನೆಗೆ ಉತ್ತರಿಸಿದ ಅವರು, ಶವಪರೀಕ್ಷೆಯ ವೇಳೆ ವ್ಯಕ್ತಿಯ ದೇಹದಲ್ಲಿ 13 ಗಾಯಗಳು ಪತ್ತೆಯಾಗಿದ್ದವು. ಈ ಕಾರಣಕ್ಕೆ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಕೊಲೆ ಪ್ರಕರಣವಾಗಿ ಬದಲಾಯಿಸಲಾಗಿದೆ ಮತ್ತು ಕ್ರೈಂ ಬ್ರಾಂಚ್– ಸಿಐಡಿ ತನಿಖೆ ಮುಂದುವರಿಸಲಿದೆ ಎಂದಿದ್ದಾರೆ.

ಏಪ್ರಿಲ್ 18ರಂದು ವಿಘ್ನೇಶ್ ಮತ್ತು ಸುರೇಶ್ ಎಂಬ ಇಬ್ಬರು ಯುವಕರನ್ನು ಅವರು ಸಂಚರಿಸಿದ್ದ ಆಟೊದಲ್ಲಿ ಗಾಂಜಾ ಮತ್ತು ಮದ್ಯದ ಬಾಟಲಿಗಳು ಪತ್ತೆಯಾದ ಕಾರಣ ಪೊಲೀಸರು ಬಂಧಿಸಿದ್ದರು. ಅವರನ್ನು ಸೆಕ್ರೆಟರಿಯೇಟ್ ಕಾಲೊನಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು. 19 ರಂದು ವಿಘ್ನೇಶ್ ಅಲ್ಲಿ ಮೃತಪಟ್ಟಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್, ಕಾನ್‌ಸ್ಟೆಬಲ್ ಮತ್ತು ಗೃಹರಕ್ಷಕ ದಳದ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.