ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾ ವಿಕಾಸ ಆಘಾಡಿ (ಎಂವಿಎ) ಮೈತ್ರಿಕೂಟ ಬಹುಮತ ಪಡೆದರೆ ಮುಖ್ಯಮಂತ್ರಿ ಸ್ಥಾನವನ್ನು ನಿರ್ಧರಿಸುವಲ್ಲಿ ಮೈತ್ರಿ ಘಟಕಗಳ ನಡುವೆ ಯಾವುದೇ ಭಿನ್ನಮತವಿಲ್ಲ. ಯಾರಿಗೆ ಯಾವ ಸ್ಥಾನ ಸಿಗುತ್ತದೆ ಎಂಬುದನ್ನು ನಿರ್ಧರಿಸಲು ಒಂದು ದಿನ ಸಾಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಚಿನ್ ಪೈಲಟ್ ಹೇಳಿದ್ದಾರೆ.

ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ಪ್ರಚಾರ ನಡೆಸಿರುವ ಪೈಲಟ್, ಎರಡು ರಾಜ್ಯಗಳಲ್ಲಿ ಬಿಜೆಪಿ ಮೈತ್ರಿಕೂಟ ಬಹುಮತ ಪಡೆಯಲಿದೆ ಎಂಬ ಮತಗಟ್ಟೆ ಸಮೀಕ್ಷೆಗಳನ್ನು ತಳ್ಳಿಹಾಕಿದ್ದಾರೆ.

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆಗಳು ಹಾಗೂ ವಿವಿಧ ರಾಜ್ಯಗಳ ಉಪಚುನಾವಣೆಗಳ ಫಲಿತಾಂಶಗಳು ಬಿಜೆಪಿ ಮತ್ತು ಎನ್ಡಿಎ ಮೈತ್ರಿಕೂಟಕ್ಕೆ ನಿಜಾಂಶವನ್ನು ಮನದಟ್ಟು ಮಾಡಲಿವೆ ಎಂದು ಸುದ್ದಿಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಪೈಲಟ್ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ‘ಡಬಲ್ ಎಂಜಿನ್’ ಸರ್ಕಾರ ಮತದಾರರ ಯಾವುದೇ ನಿರೀಕ್ಷೆಗಳನ್ನು ಈಡೇರಿಸಿಲ್ಲ. ಆದ್ದರಿಂದ ರಾಜ್ಯದಲ್ಲಿ ಸರ್ಕಾರ ಬದಲಾವಣೆಯಾಗಬೇಕು ಎಂಬ ಹಂಬಲ ಮತದಾರರಲ್ಲಿ ಕಾಣಿಸುತ್ತಿದೆ. ಮಹಾರಾಷ್ಟ್ರದಲ್ಲಿ ಎಂವಿಎ ಮೈತ್ರಿಕೂಟ ಬಹುಮತ ಪಡೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಜಾರ್ಖಂಡ್ನಲ್ಲಿಯೂ ಬಿಜೆಪಿ ವಿಶ್ವಾಸಾರ್ಹತೆಯನ್ನು ಹೊಂದಿಲ್ಲ. ಎರಡೂ ರಾಜ್ಯಗಳಲ್ಲಿ ‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳು ಸರ್ಕಾರ ರಚಿಸಲಿವೆ ಎಂದು ನಾನು ಭಾವಿಸುತ್ತೇನೆ. ಎನ್ಡಿಎ ಮಿತ್ರಪಕ್ಷಗಳು ಹಲವು ವಿಷಯಗಳಲ್ಲಿ ಸಹಮತ ಹೊಂದಿಲ್ಲ. ಕಳೆದ 10 ವರ್ಷಗಳಲ್ಲಿ ಒಮ್ಮತದ ಕೊರತೆ, ಚರ್ಚೆಯ ಕೊರತೆಯಿಂದಾಗಿ ಸಂಸತ್ತಿನಲ್ಲಿ ಹಲವು ಮಸೂದೆಗಳನ್ನು ಹಿಂಪಡೆದಿರುವುದನ್ನು ನಾವು ನೋಡಿದ್ದೇವೆ’ ಎಂದು ಪೈಲಟ್ ಹೇಳಿದ್ದಾರೆ.
.ಮಹಾರಾಷ್ಟ್ರ | ರಸಗೊಬ್ಬರ ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆ: ಮೂವರು ಸಾವು.ಮಹಾರಾಷ್ಟ್ರ | ಮತಗಟ್ಟೆಯಲ್ಲಿ ದಾಂದಲೆ: 40 ಮಂದಿ ವಿರುದ್ಧ ಪ್ರಕರಣ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.