ಇಂಫಾಲ್:ಮಣಿಪುರದ 12ನೇ ಮುಖ್ಯಮಂತ್ರಿಯಾಗಿ ಎನ್. ಬಿರೆನ್ ಸಿಂಗ್ ಅವರು ಇಂದು (ಸೋಮವಾರ) ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜ್ಯಪಾಲ ಲಾ ಗಣೇಶನ್ ಅವರುಬಿರೆನ್‌ಗೆ ಪ್ರಮಾಣ ವಚನ ಬೋಧಿಸಿದರು.ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಭಾನುವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿರೆನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಯ ವೀಕ್ಷಕಿಯಾಗಿ ನೇಮಕಗೊಂಡಿದ್ದಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಸತತ ಎರಡನೇ ಅವಧಿಗೆಬಿರೆನ್ ಮುಂದುವರಿಯಲಿದ್ದಾರೆ ಎಂದು ಪ್ರಕಟಿಸಿದ್ದರು.

ನಿರ್ಮಲಾ ಮತ್ತು ಸಹ ವೀಕ್ಷಕ ಕಿರಣ್ ರಿಜಿಜು ಅವರು ಭಾನುವಾರ ಇಂಫಾಲ್‌ಗೆ ಆಗಮಿಸಿದ್ದರು. ಕೇಂದ್ರ ಸಚಿವ ಭೂಪೇಂದ್ರ ಯಾದವ್, ಮಣಿಪುರ ರಾಜ ವಂಶಸ್ಥ ಹಾಗೂ ಬಿಜೆಪಿ ಸಂಸದ ಲೈಶೆಂಬಾ ಸನಜೋಬ, ಪಕ್ಷದ ವಕ್ತಾರ ಸಂಬಿತ್ ಪಾತ್ರಾ ಅವರೂ ಸಭೆಯಲ್ಲಿ ಭಾಗಿಯಾಗಿದ್ದರು.

60 ಸದಸ್ಯ ಬಲದ ಮಣಿಪುರ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 32 ಸ್ಥಾನಗಳಲ್ಲಿ ಜಯ ಸಾಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.