ಚೆನ್ನೈ: ಹಿರಿಯ ರಾಜಕಾರಣಿ ಕೆ.ಪೊನ್ಮುಡಿ ಅವರನ್ನು ಸಚಿವರಾಗಿ ನೇಮಿಸ
ಬೇಕು ಎಂಬ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಶಿಫಾರಸನ್ನು ರಾಜ್ಯಪಾಲ ಆರ್.ಎನ್.ರವಿ ತಳ್ಳಿಹಾಕಿದ್ದಾರೆ. ಈ ಮೂಲ ಡಿಎಂಕೆ ಸರ್ಕಾರದೊಂದಿಗೆ ಸಂಘರ್ಷಕ್ಕೆ ಮುಂದಾಗಿದ್ದಾರೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್ ಪೊನ್ಮುಡಿ ಅವರಿಗೆ ಶಿಕ್ಷೆ ಪ್ರಕಟಿಸಿದ ಹಿನ್ನೆಲೆಯಲ್ಲಿ ಡಿಸೆಂಬರ್ 2023ರಲ್ಲಿ ಪೊನ್ಮುಡಿ ಅವರ ಶಾಸಕ ಸ್ಥಾನ ರದ್ದುಗೊಂಡಿತ್ತು. ಸುಪ್ರೀಂ ಕೋರ್ಟ್ ಮಾರ್ಚ್ 11ರಂದು ನೀಡಿದ್ದ ಆದೇಶದಲ್ಲಿ ಪೊನ್ಮುಡಿ ಅವರಿಗೆ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ ನೀಡಿತ್ತು. ಹಿಂದೆಯೇ, ತಮಿಳುನಾಡು ವಿಧಾನಸಭೆ ಸ್ಪೀಕರ್ ಎಂ.ಅಪ್ಪಾವು ಅವರು ಪೊನ್ಮುಡಿ ಅವರನ್ನು ಶಾಸಕರಾಗಿ ಮರುನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದರು.

ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್‌ನ ಎದುರು ಇರುವ ಕಾರಣ ಸಚಿವರಾಗಿ ನಿಯುಕ್ತಿಗೊಳಿಸಲು ಸಾಧ್ಯವಿಲ್ಲ ಎಂದು ರಾಜ್ಯಪಾಲರು ಪತ್ರ ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.