ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು | ವರದಿ ಪರಿಶೀಲಿಸಿ ಸೂಕ್ತ ಕ್ರಮ: ನಡ್ಡಾ

Published : 20 ಸೆಪ್ಟೆಂಬರ್ 2024, 10:20 IST
Last Updated : 20 ಸೆಪ್ಟೆಂಬರ್ 2024, 10:20 IST
ಫಾಲೋ ಮಾಡಿ
Comments

ನವದೆಹಲಿ: ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಅವರೊಂದಿಗೆ ಮಾತನಾಡಿದ್ದು, ಸಂಪೂರ್ಣ ವರದಿ ರವಾನಿಸಲು ತಿಳಿಸಿರುವುದಾಗಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ.

ಈ ವಿಷಯವನ್ನು ಪರಿಶೀಲಿಸಿ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಅವಧಿಯಲ್ಲಿ 100 ದಿನಗಳನ್ನು ಪೂರೈಸಿದ ‌ಕುರಿತು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ತಿರುಪತಿ ಲಡ್ಡು ವಿಷಯವನ್ನು ನಾನು ಸಾಮಾಜಿಕ ಜಾಲತಾಣಗಳ ಮೂಲಕ ತಿಳಿದುಕೊಂಡೆ. ಈ ಕುರಿತು ಚಂದ್ರಬಾಬು ನಾಯ್ಡು ಅವರೊಂದಿಗೆ ಇಂದು (ಶುಕ್ರವಾರ) ಮಾತನಾಡಿದ್ದೇನೆ. ಸಂಪೂರ್ಣ ವರದಿ ಕಳುಹಿಸಲು ತಿಳಿಸಿದ್ದೇನೆ. ವರದಿ ಬಂದ ಬಳಿಕ ಅದನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ತಿಳಿಸಿದ್ದಾರೆ.

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರವು ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಸಲು ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಬುಧವಾರ ಆರೋಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT