ಅಮರಾವತಿ: ಭಾರಿ ಮಳೆಯಿಂದಾಗಿ ಆಂಧ್ರಪ್ರದೇಶದಲ್ಲಿ ಉಂಟಾದ ಪ್ರವಾಹ ಸ್ಥಿತಿಯು ತಮ್ಮ ರಾಜಕೀಯ ಜೀವನದಲ್ಲಿ ಕಂಡ ದೊಡ್ಡ ದುರಂತ ಎಂದಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡ, ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ಕೇಂದ್ರವನ್ನು ಆಗ್ರಹಿಸಿದ್ದಾರೆ.

ವಿಶೇಷವಾಗಿ ವಿಜಯವಾಡದಲ್ಲಿ ಮಳೆಯಿಂದಾಗಿ ಅಪಾರ ಹಾನಿಯಾಗಿದೆ. ಈವರೆಗೆ ಮಳೆ ಸಂಬಂಧಿತ ಅವಘಡಗಳಿಂದ ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ. ನನ್ನ ವೃತ್ತಿಜೀವನದಲ್ಲಿ, ಇದು ಅತಿದೊಡ್ಡ ವಿಪತ್ತು, ನಾವು ಹುದುದ್ ಚಂಡಮಾರುತ ಮತ್ತು ತಿತ್ಲಿ ಚಂಡಮಾರುತದಂತಹ ಕೆಲವು ಘಟನೆಗಳಿಗೆ ಸಾಕ್ಷಿಯಾಗಿದ್ದೇವೆ. ಆದರೆ ಇವುಗಳಿಗೆ ಹೋಲಿಸಿದರೆ, ಇಲ್ಲಿ ಜನರ ನೋವು ಮತ್ತು ಆಸ್ತಿ ನಷ್ಟವು ದೊಡ್ಡದಾಗಿದೆ’ ಎಂದು ನಾಯ್ಡು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ವಿಪತ್ತಿಗೆ ಸಂಬಂಧಿಸಿದ ಎಲ್ಲಾ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗುವುದು. ನಷ್ಟದಿಂದ ಚೇತರಿಸಿಕೊಳ್ಳಲು ರಾಜ್ಯಕ್ಕೆ ಆರ್ಥಿಕ ಸಹಾಯ ನೀಡುವಂತೆ ಮನವಿ ಮಾಡುವುದಾಗಿ ನಾಯ್ಡು ಹೇಳಿದ್ದಾರೆ.

ಸೋಮವಾರ 10,000 ಜನರಿಗೆ ಆಹಾರ ಪ್ಯಾಕೆಟ್‌ಗಳನ್ನು ತಲುಪಿಸಲು ಎಂಟರಿಂದ ಒಂಬತ್ತು ಡ್ರೋನ್‌ಗಳನ್ನು ಬಳಸಲಾಗಿದೆ. ಮಂಗಳವಾರ ಇನ್ನೂ 35 ಡ್ರೋನ್‌ಗಳನ್ನು ನಿಯೋಜಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
.ಭಾರಿ ಮಳೆಗೆ ಆಂಧ್ರ, ತೆಲಂಗಾಣ ತತ್ತರ: 31 ಜನರ ಸಾವು– ₹5000 ಕೋಟಿ ನಷ್ಟ.ಆಂಧ್ರ ಪ್ರದೇಶದಲ್ಲಿ ಭಾರಿ ಮಳೆ: ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ.ಆಂಧ್ರಪ್ರದೇಶದಲ್ಲಿ ಭಾರಿ ಮಳೆ, ಪ್ರವಾಹ: 30 ಸಾವಿರಕ್ಕೂ ಅಧಿಕ ಮಂದಿ ಸ್ಥಳಾಂತರ.PHOTOS | ಆಂಧ್ರಪ್ರದೇಶದಲ್ಲಿ ಭಾರಿ ಮಳೆ, ಪ್ರವಾಹ: ರಕ್ಷಣಾ ಕಾರ್ಯಾಚರಣೆ ಚುರುಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.