ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಬಿಬಿಸಿ ನಿರ್ಮಾಣ ಮಾಡಿರುವ ವಿವಾದಿತ ಸಾಕ್ಷ್ಯ ಚಿತ್ರ ಪ್ರದರ್ಶನಕ್ಕೆ ತಯಾರಿ ಮಾಡಿದ ಆರೋಪದಲ್ಲಿ, ಇಲ್ಲಿನ ಪ್ರತಿಷ್ಠಿತ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ.

ಇಬ್ಬರು ಕೂಡ ಎಡಪಂಥೀಯ ವಿದ್ಯಾರ್ಥಿ ಸಂಘಟನೆಗೆ ಸೇರಿದವರು. ವಿವಿಯ ಸಮೂಹ ಮಾಧ್ಯಮ ವಿಭಾಗದಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು.

ವಿವಿಯ ಗೇಟ್ ಮುಂಭಾಗದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಅಶ್ರುವಾಯು ಹಾಗೂ ಜಲಫಿರಂಗಿ ವಾಹನಗಳು ಕೂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ.

ಇದೇ ವೇಳೆ ಕ್ಯಾಂಪಸ್ನಲ್ಲಿ ಅನಧಿಕೃತ ಜಮಾವಣೆ ನಿಷೇಧಿಸಲಾಗಿದೆ ಎಂದು ಆಡಳಿತ ಮಂಡಳಿ ಹೇಳಿದೆ.

2002ರ ಗುಜರಾತ್ ಗಲಭೆ ಸಂಬಂಧ ನಿರ್ಮಾಣ ಮಾಡಿದ ಸಾಕ್ಷ್ಯಚಿತ್ರ ಇದಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರ ನಿಷೇಧ ಹೇರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.