ನವದೆಹಲಿ: ಒಲಿಂಪಿಕ್ಸ್‌ನಲ್ಲಿ ಈ ಬಾರಿ ಭಾರತದ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಲು ನರೇಂದ್ರ ಮೋದಿ ಸರ್ಕಾರದ ‘ಟಾಪ್ಸ್ (ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಸ್ಕೀಮ್/ ಟಿಒಪಿಎಸ್)’ ಯೋಜನೆಯೂ ಕಾರಣ ಎಂದು ಕೇಂದ್ರ ಸಚಿವ ಸರ್ಬಾನಂದ ಸೊನೊವಾಲ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ 2014ರ ಸೆಪ್ಟೆಂಬರ್‌ನಲ್ಲಿ ಯೋಜನೆ ಆರಂಭಗೊಂಡಿತ್ತು ಎಂದು ಅವರು ತಿಳಿಸಿದ್ದಾರೆ.

ಓದಿ:Tokyo Olympics: ಚಿನ್ನ ಗೆದ್ದ ನೀರಜ್ ಚೋಪ್ರಾಗೆ ಹರಿಯಾಣದಿಂದ ₹6 ಕೋಟಿ ಬಹುಮಾನ

ಸಂಭಾವ್ಯ ಪದಕ ವಿಜೇತರನ್ನು ಗುರುತಿಸಲು ತಜ್ಞರನ್ನು ಒಳಗೊಂಡ ಆಯ್ಕೆ ಸಮಿತಿಯನ್ನು ನೇಮಿಸಲಾಗಿತ್ತು. ಹಾಲಿ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅದನ್ನು ಮುನ್ನಡೆಸಿದರು ಎಂದೂ ಸೊನೊವಾಲ್ ಹೇಳಿದ್ದಾರೆ.

ಈ ಯೋಜನೆ ಅಡಿಯಲ್ಲಿ ಸರ್ಕಾರವು ಅಥ್ಲೀಟ್‌ಗಳಿಗೆ ಹಣಕಾಸು ನೆರವು, ತರಬೇತಿ, ಕೋಚಿಂಗ್ ಮತ್ತು ವೈದ್ಯಕೀಯ ನೆರವು ನೀಡಿದೆ. 2020ರ ಒಲಿಂಪಿಕ್ಸ್‌ನಲ್ಲಿ ಪದಕಗಳನ್ನು ಗೆಲ್ಲುವುದೇ ಈ ಯೋಜನೆಯ ಮುಖ್ಯ ಉದ್ದೇಶವಾಗಿತ್ತು ಎಂದು ಅವರು ಹೇಳಿದ್ದಾರೆ.

ಸರ್ಬಾನಂದ ಸೊನೊವಾಲ್ ಅವರು ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ 2017ರ ವರೆಗೆ ಕ್ರೀಡಾ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.