ನಾಸಿಕ್: ಠಾಣೆಯಲ್ಲಿಯೇ ಸರ್ವಿಸ್ ರಿವಾಲ್ವರ್ನಿಂದ ಗುಂಡು ಹಾರಿಸಿ ಇನ್ಸ್ಪೆಕ್ಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ನಾಸಿಕ್ನಿಂದ ವರದಿಯಾಗಿದೆ.

ನಾಸಿಕ್ ನಗರದ ಪೊಲೀಸ್ ಠಾಣೆಯಲ್ಲಿ ನಡೆದಿದ್ದು, ಮೃತರನ್ನು ಅಶೋಕ್ ನಜನ್ (40) ಎಂದು ಗುರುತಿಸಲಾಗಿದೆ.

ಅಶೋಕ್ ಇಂದು( ಮಂಗಳವಾರ) ಬೆಳಿಗ್ಗೆ ಅಂಬಾಡ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದರು. ಕೆಲ ಸಮಯದ ಬಳಿಕ ಅವರು ಠಾಣೆಯ ತಮ್ಮ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಅಸಹಜ ಸ್ಥಿತಿಯಲ್ಲಿ ಕಂಡು ಬಂದ ಅಶೋಕ್ ಅವರನ್ನು ಪೊಲೀಸ್ ಸಿಬ್ಬಂದಿ, ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಷ್ಟರ ಹೊತ್ತಿಗೆ ಅಶೋಕ್ ಮೃತಪಟ್ಟಿದ್ದರು.

ಘಟನೆಯ ನಂತರ ಪೊಲೀಸ್ ಕಮಿಷನರ್ ಸಂದೀಪ್ ಕಾರ್ಣಿಕ್ ಹಾಗೂ ಇತರ ಹಿರಿಯ ಅಧಿಕಾರಿಗಳು ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

‘ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಸಂದೀಪ್‘ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.