ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ಮಾಡಿದ ಬೆನ್ನಲೇನ್ಯಾಷನಲ್ ಹೆರಾಲ್ಡ್ ಪತ್ರಿಕೆಕಚೇರಿಗಳ ಮೇಲೆಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ದಾಳಿ ಮಾಡಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ದೇಶದಲ್ಲಿಹಣದುಬ್ಬರ, ನಿರುದ್ಯೋಗ ಮತ್ತು ಆದಾಯ ಕುಸಿತದಂತಹಸಮಸ್ಯೆಗಳು ಹೆಚ್ಚಳವಾಗಿದ್ದು ಇಂತಹ ನಿರ್ಣಾಯಕವಿಷಯಗಳಲ್ಲಿ ಪ್ರತಿಪಕ್ಷಗಳು ಹೋರಾಟ ಮಾಡುತ್ತಿವೆ. ಪ್ರತಿಪಕ್ಷಗಳ ಹೋರಾಟವನ್ನು ಹತ್ತಿಕ್ಕಲು ಬಿಜೆಪಿ ಸರ್ಕಾರ ಇ.ಡಿ ದಾಳಿಗಳನ್ನು ಮಾಡಿಸುತ್ತಿದೆ. ಇವರಿಗೆ ದೇಶದ ಜನರಿಗೆ ಉತ್ತರಿಸಲು ಸಾಧ್ಯವಾಗುತ್ತಿಲ್ಲ, ಆದ್ದರಿಂದ ಅವರು ಪ್ರತಿಪಕ್ಷಗಳನ್ನು ಅವಮಾನಿಸಲು ಮತ್ತು ಬ್ಲಾಕ್ಮೇಲ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಮಾತ್ರವಲ್ಲ, ಹಲವು ವಿರೋಧ ಪಕ್ಷಗಳ ನಾಯಕರು ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಸೈಯದ್ ನಾಸೀರ್ ಹುಸೇನ್ ಹೇಳಿದ್ದಾರೆ.

ಮೋದಿ ಸರ್ಕಾರದ ವಿರುದ್ಧ ಮಾತನಾಡುವವರ ವಿರುದ್ಧದ ಸೇಡಿನ ರಾಜಕಾರಣ ಮಾಡಲಾಗುತ್ತಿದೆ. ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಇನ್ನು ನಾವು ಸುಮ್ಮನಿರಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ.

ಓದಿ:ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕೇಂದ್ರ ಕಚೇರಿ ಸೇರಿ ದೇಶದ 12 ಕಡೆ ಇ.ಡಿ ದಾಳಿ

ನ್ಯಾಷನಲ್ ಹೆರಾಲ್ಡ್ನ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೆಶನಾಲಯವುದೆಹಲಿಯ ಕೇಂದ್ರ ಕಚೇರಿ ಸೇರಿದಂತೆ ದೇಶದ 12 ಕಡೆಗಳಲ್ಲಿ ದಾಳಿ ನಡೆಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.