ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳನ್ನು ಭಾನುವಾರ ದೆಹಲಿ ಪೊಲೀಸರು ತೆರವುಗೊಳಿಸಿದ್ದರು.

ಹಾಗಿದ್ದರೂ ಛಲ ಬಿಡದ ಕುಸ್ತಿಪಟುಗಳು, ತಾವು ಕಷ್ಟಪಟ್ಟು ಗಳಿಸಿರುವ ಪದಕಗಳನ್ನು ಗಂಗಾ ನದಿಗೆ ಎಸೆದು ಇಂಡಿಯಾ ಗೇಟ್ ಬಳಿ ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ.

ಆದರೆ ಇಂಡಿಯಾ ಗೇಟ್ ಬಳಿ ಕುಸ್ತಿಪಟುಗಳ ಪ್ರತಿಭಟನೆಗೆ ದೆಹಲಿ ಪೊಲೀಸ್ ಅನುಮತಿಸುವುದಿಲ್ಲ ಎಂದು ವರದಿಯಾಗಿದೆ.

ಇಲ್ಲಿಯವರೆಗೆ ಯಾವುದೇ ಮನವಿ ಬಂದಿಲ್ಲ. ಪ್ರತಿಭಟನೆ ನಡೆಸಲು ಬಯಸಿದ್ದಲ್ಲಿ ಡಿಸಿಪಿಗೆ ಲಿಖಿತ ಪತ್ರ ಸಲ್ಲಿಸಬೇಕಿದೆ. ಅದಾದ ಬಳಿಕ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ರಾಷ್ಟ್ರೀಯ ಸ್ಮಾರಕ ಪ್ರತಿಭಟನೆ ನಡೆಸುವ ಸ್ಥಳವಲ್ಲ. ಪ್ರತಿಭಟನೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮತ್ತೊಂದೆಡೆ ಪ್ರಾಣ ಹೋಗುವವರೆಗೂ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಕುಸ್ತಿಪಟುಗಳು ಹೇಳಿದ್ದಾರೆ.

ಇಂಡಿಯಾ ಗೇಟ್ ಬದಲು ರಾಮಲೀಲಾ ಮೈದಾನ ಮುಂತಾದ ಬದಲಿ ಸ್ಥಳಗಳನ್ನು ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಸೂಚಿಸುವ ಸಾಧ್ಯತೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.