ರಾಯಪುರ: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ನಕ್ಸಲ್ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ಜಗರ್ಗುಂಡಾ ಪೊಲೀಸ್ ಠಾಣಾ ವ್ಯಾಪ್ತಿಯ ತುಮರ್ ಗಟ್ಟಾ ಹಾಗೂ ಸಿಂಗವರಂ ಗ್ರಾಮಗಳ ಸಮೀಪದಲ್ಲಿರುವ ಗುಡ್ಡಗಾಡು ಪ್ರದೇಶದಲ್ಲಿ ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ಶೋಧ ನಡೆಸಿದಾಗ ಗುಂಡಿನ ಚಕಮಕಿ ನಡೆದಿದೆ.

ನಕ್ಸಲರು ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಶುಕ್ರವಾರ ರಾತ್ರಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು.

ನಕ್ಸಲ್ ಹತನಾಗಿರುವ ಪ್ರದೇಶದಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಶೋಧ ಮುಂದುವರಿದಿದೆ.

ಕೆಲವು ದಿನಗಳ ಹಿಂದೆಯಷ್ಟೇ ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ದಾಳಿಯಲ್ಲಿ ವಿಶೇಷ ಕಾರ್ಯಪಡೆಯ (ಎಸ್ಟಿಎಫ್) ಇಬ್ಬರು ಸಿಬ್ಬಂದಿ ಹುತಾತ್ಮರಾಗಿದ್ದರು.

ಈ ವರ್ಷ ಛತ್ತೀಸಗಢದಲ್ಲಿ ಭದ್ರತಾ ಪಡೆ ನಡೆಸಿದ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಇದುವರೆಗೆ 142 ನಕ್ಸಲ್ರನ್ನು ಹತ್ಯೆ ಮಾಡಲಾಗಿದೆ.
.ಕೈಗಾರಿಕೋದ್ಯಮಿಗಳಿಂದ ಹಣ ವಸೂಲಿ ಮಾಡಲು ರಾಹುಲ್ ಗಾಂಧಿಯಿಂದ ನಕ್ಸಲ್ ಭಾಷೆ: ಮೋದಿ.ನಕ್ಸಲರು ಇರಿಸಿದ್ದ IED ಸ್ಫೋಟ: ಇಬ್ಬರು ಪೊಲೀಸರು ಹುತಾತ್ಮ, ನಾಲ್ವರಿಗೆ ಗಾಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.