ದಾಂತೇವಾಡ: ಛತ್ತೀಸಗಢದ ದಾಂತೇವಾಡ ಜಿಲ್ಲೆಯಲ್ಲಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 14 ವಾಹನಗಳು ಮತ್ತು ಯಂತ್ರೋಪಕರಣಗಳನ್ನು ಶಂಕಿತ ನಕ್ಸಲರು ಸುಟ್ಟು ಭಸ್ಮ ಮಾಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಭಾನ್ಸಿ ಪೊಲೀಸ್ ಠಾಣಾ ವ್ಯಾಪ್ತಿಯ ಬಂಗಾಲಿ ಶಿಬಿರದಲ್ಲಿ ಭಾನುವಾರ ತಡರಾತ್ರಿ ಶಸ್ತ್ರಾಧಾರಿಯಾಗಿ ಬಂದಿದ್ದ 40–50 ಮಂದಿ ಅಪರಿಚಿತ ವ್ಯಕ್ತಿಗಳು, ಸ್ಥಳದಲ್ಲಿ ನಿಲ್ಲಿಸಲಾಗಿದ್ದ ಟ್ರಕ್‌ಗಳು, ಪೊಕ್ಲೇನ್ ಸೇರಿದಂತೆ ಇನ್ನಿತರ ಯಂತ್ರೋಪಕರಣಗಳು ಹಾಗೂ 14 ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಪೈಕಿ 13 ವಾಹನಗಳು ದಾಂತೇವಾಡ ಮತ್ತು ಬಚೇಲಿ ನಡುವೆ ರಸ್ತೆ ನಿರ್ಮಾಣದಲ್ಲಿ ತೊಡಗಿದ್ದರೆ, ಮತ್ತೊಂದು ನೀರಿನ ಟ್ಯಾಂಕರ್ ವಾಹನವು ರೈಲ್ವೆ ಕಾಮಗಾರಿಯಲ್ಲಿ ನಿರತವಾಗಿತ್ತು. ಈ ಘಟನೆಯಲ್ಲಿ ಯಾರೊಬ್ಬರೂ ಗಾಯಗೊಂಡಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಕುರಿತ ಮಾಹಿತಿ ಲಭ್ಯವಾಗುತ್ತಿದ್ದಂತೆ ಭಾನ್ಸಿ ಪೊಲೀಸ್ ಠಾಣಾಧಿಕಾರಿ ನೇತೃತ್ವದ ತಂಡವು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿದ್ದು, ಮೇಲ್ನೋಟಕ್ಕೆ ಇದು ನಕ್ಸಲರ ಕೃತ್ಯ ಎಂಬಂತೆ ಕಾಣುತ್ತಿದೆ. ತಪ್ಪಿತಸ್ಥರ ಬಂಧನಕ್ಕಾಗಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಬಸ್ತರ್ ವಿಭಾಗದಲ್ಲಿ ನಡೆಯುವ ರಸ್ತೆ ಕಾಮಗಾರಿಗೆ ನಕ್ಸಲರು ಆಗ್ಗಾಗ್ಗೆ ತಡೆಯೊಡ್ಡಲು ಯತ್ನಿಸುತ್ತಾರೆ. ಅಲ್ಲದೆ, ರಸ್ತೆಗಳು, ವಾಹನಗಳು ಮತ್ತು ಕಾಮಗಾರಿಗೆ ಬಳಸುವ ಯಂತ್ರೋಪಕರಣಗಳನ್ನು ಧ್ವಂಸ ಮಾಡುವ ಮೂಲಕ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.