ರಾಯಪುರ:ಛತ್ತೀಸಗಡದ ಕಂಕೆರ್ ಜಿಲ್ಲೆಗೆ ಸೇರಿದ ಗ್ರಾಮವೊಂದರ ಹೊರವಲಯದಲ್ಲಿ ನಕ್ಸಲರು ಹಾಗೂ ಬಿಎಸ್‌ಎಫ್ ಯೋಧರ ನಡುವೆ ಗುಂಡಿನ ದಾಳಿ ನಡೆದ ಪರಿಣಾಮ ನಾಲ್ಕು ಮಂದಿಯೋಧರು ಮೃತಪಟ್ಟಿದ್ದು ಇಬ್ಬರು ಯೋಧರು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.

ಮಹ್ಲಾ ಗ್ರಾಮದ ಸಮೀಪ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗಸ್ಕಿರ್ಮಿಶ್ ಎಂಬ ಸ್ಥಳದಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ದಾಳಿ ನಡೆದಿದೆ. ಪರಿಣಾಮ ನಾಲ್ಕು ಮಂದಿ ಬಿಎಸ್ ಎಫ್ ಯೋಧರು ಮೃತಪಟ್ಟು ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ನಕ್ಸಲ್ ನಿಗ್ರಹಪಡೆಯ ಡಿಐಜಿ ಸುಂದರ್ ರಾಜ್ ಪಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಿಎಸ್ ಎಫ್ ನ 11ನೇ ಬೆಟಾಲಿಯನ್ ನ ಸಿಬ್ಬಂದಿ ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿತೊಡಗಿದ್ದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೆ ಹೆಚ್ಚಿನ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರೂ ನಕ್ಸಲರು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಛತ್ತೀಸಗಡದ ಎರಡು ಲೋಕಸಭಾ ಕ್ಷೇತ್ರಗಳಿಗೆಇದೇ 18ಕ್ಕೆ ಚುನಾವಣೆ ನಡೆಯಲಿದ್ದು ಮತದಾರರಲ್ಲಿ ಆತಂಕ ಉಂಟು ಮಾಡಲಿಕ್ಕಾಗಿಯೇ ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.