ಜಾರ್ಖಂಡ್: ನಕ್ಸಲರು ಹಾಗೂ ನಕ್ಸಲ್ ನಿಗ್ರಹ ಪಡೆಗಳ ಕಮಾಂಡೋಗಳ ನಡುವೆ ಗುಂಡಿನ ಚಕಮಕಿ ನಡೆದು ಒಬ್ಬರು ಕಮಾಂಡೋ ಮೃತಪಟ್ಟು ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ನಾಲ್ಕು ಮಂದಿ ನಕ್ಸಲರು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಜಾರ್ಖಂಡ್‌ನ ಡಂಕಾ ಎಂಬಲ್ಲಿ ಈ ಘಟನೆ ನಡೆದಿದೆ. ವಿಷಯ ತಿಳಿದ ಕೂಡಲೆ ಹೆಚ್ಚಿನ ಪೊಲೀಸರು ಸ್ಥಳಕ್ಕೆ ಧಾವಿಸಿ ನಕ್ಸಲರ ಶೋಧ ಕಾರ್ಯ ಮುಂದುವರಿಸಿವೆ. ನಕ್ಸಲರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಕ್ಲಲ್ ನಿಗ್ರಹ ಪಡೆಗಳು ತೀವ್ರ ಕಾರ್ಯಾಚರಣೆ ಕೈಗೊಂಡಿದ್ದವು. ಈ ಸಮಯದಲ್ಲಿ ಪೊಲೀಸರು ಹಾಗೂ ನಕ್ಸಲರು ಮುಖಾ ಮುಖಿಯಾದ ಪರಿಣಾಮ ಈ ಘಟನೆ ನಡೆದಿದೆ.

ಗಾಯಗೊಂಡ ಕಮಾಂಡೋಗಳನ್ನು ಹೆಲಿಕಾಪ್ಟರ್ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಆ ಪ್ರದೇಶದ ಉಸ್ತುವಾರಿ ವಹಿಸಿರುವ ಎಸ್ಪಿ ವೈ.ಎಸ್.ರಮೇಶ್ ಮಾಧ್ಯಮದವರಿಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.