ಮುಂಬೈ: ‘ಭವಿಷ್ಯದಲ್ಲಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶವಿಲ್ಲ’ ಎಂದು ಹೇಳಿರುವ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್ಸಿಪಿ–ಎಸ್ಪಿ) ಮುಖ್ಯಸ್ಥ ಶರದ್ ಪವಾರ್, ರಾಜಕೀಯ ನಿವೃತ್ತಿಯ ಬಗ್ಗೆ ಪರೋಕ್ಷ ಸುಳಿವು ನೀಡಿದ್ದಾರೆ.

ತಮ್ಮ ಮೊಮ್ಮಗ ಯುಗೇಂದ್ರ ಪವಾರ್ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ಅವರು ಸಾರ್ವಜನಿಕರನುದ್ದೇಶಿಸಿ ಮಾತನಾಡಿದ್ದಾರೆ. ‘ರಾಜ್ಯಸಭಾ ಅಧಿಕಾರಾವಧಿ ಮುಗಿದ ನಂತರ ಸಂಸದೀಯ ಸ್ಥಾನದಲ್ಲಿ ಉಳಿಯಬೇಕೇ? ಬೇಡವೇ? ಎನ್ನುವುದರ ಬಗ್ಗೆ ಯೋಚಿಸುತ್ತೇನೆ’ ಎಂದರು.

‘ನಾನು ಅಧಿಕಾರದಲ್ಲಿ ಇಲ್ಲ, ರಾಜ್ಯಸಭೆಯಲ್ಲಿ ಇದ್ದೇನೆ. ರಾಜ್ಯಸಭಾ ಅಧಿಕಾರಾವಧಿ ಇನ್ನು ಒಂದೂವರೆ ವರ್ಷ ಬಾಕಿ ಇದೆ. ಇದುವರೆಗೆ ನಾನು 14 ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಇನ್ನು ಎಷ್ಟು ಚುನಾವಣೆಯಲ್ಲಿ ಸ್ಪರ್ಧಿಸಲಿ? ಹೊಸ ಪೀಳಿಗೆಗೆ ಅವಕಾಶ ನೀಡಬೇಕಿದೆ’ ಎಂದು ಹೇಳಿದರು.

‘ಅಧಿಕಾರ ತೊರೆದರು ಜನಸೇವೆ ಮಾಡುವುದನ್ನು ನಾನು ಬಿಡುವುದಿಲ್ಲ. ಸಾಮಾಜಿಕ ಸೇವೆಗೆ ಚುನಾವಣೆಯ ಅಗತ್ಯವಿಲ್ಲ’ ಎಂದರು.

‘ಲೋಕಸಭಾ ಚುನಾವಣೆ ಸೇರಿದಂತೆ ಭವಿಷ್ಯದಲ್ಲಿ ಯಾವುದೇ ಚುನಾವಣೆಯಲ್ಲಿಯೂ ನಾನು ಸ್ಪರ್ಧಿಸುವುದಿಲ್ಲ. ಇದುವರೆಗೆ ಸ್ಪರ್ಧಿಸಿದ್ದ ಎಲ್ಲ ಚುನಾವಣೆಯಲ್ಲಿಯೂ ನೀವು ನನ್ನನ್ನು ಗೆಲ್ಲಿಸಿದ್ದೀರಿ. ಇದೀಗ ಹೊಸ ತಲೆಮಾರಿಗೆ ಅವಕಾಶ ನೀಡಬೇಕಿದೆ’ ಎಂದು ಹೇಳಿದರು.

‘30 ವರ್ಷಗಳ ಹಿಂದೆ ರಾಷ್ಟ್ರ ರಾಜಕಾರಣದಲ್ಲಿ ಇರಲು ನಿರ್ಧರಿಸಿ, ರಾಜ್ಯದ ಎಲ್ಲಾ ಜವಾಬ್ದಾರಿಗಳನ್ನು ಅಜಿತ್ ಪವಾರ್ ಅವರಿಗೆ ನೀಡಿದ್ದೆ. ಸುಮಾರು 25ರಿಂದ 30 ವರ್ಷಗಳ ರಾಜ್ಯದ ಜವಾಬ್ದಾರಿಯನ್ನು ಅವರು ಹೊತ್ತುಕೊಂಡಿದ್ದರು. ಈಗ ಮುಂದಿನ 30 ವರ್ಷಕ್ಕೆ ವ್ಯವಸ್ಥೆ ಮಾಡಬೇಕಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.