ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ, ಪ್ರಸಕ್ತ ವರ್ಷದ ಎಂಟು ತಿಂಗಳ ಅವಧಿಯಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಶೇ 46ರಷ್ಟು ಏರಿಕೆಯಾಗಿದ್ದು, ಇವುಗಳಲ್ಲಿ ಅರ್ಧಕ್ಕೂ ಹೆಚ್ಚಿನ ಪ್ರಕರಣಗಳು ಉತ್ತರ ಪ್ರದೇಶ ರಾಜ್ಯದಲ್ಲಿ ದಾಖಲಾಗಿವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.

ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ, ‘ಆಯೋಗವು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಾ ಬಂದಿದೆ. ಇದರಿಂದಾಗಿ ಹೆಚ್ಚಿನ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ದೂರುಗಳು ದಾಖಲಾಗುತ್ತಿವೆ‘ ಎಂದು ಹೇಳಿದರು.

ಈ ವರ್ಷದ ಜನವರಿಯಿಂದ ಆಗಸ್ಟ್‌ವರೆಗೆ ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯಗಳ ಕುರಿತು ರಾಷ್ಟ್ರೀಯ ಮಹಿಳಾ ಆಯೋಗ 19,953 ದೂರುಗಳನ್ನು ಸ್ವೀಕರಿಸಿದೆ. 2020ರಲ್ಲಿ ಇದೇ ಅವಧಿಯಲ್ಲಿ 13,618 ದೂರುಗಳು ದಾಖಲಾಗಿದ್ದವು.

ಈ ವರ್ಷದ ಜುಲೈ ತಿಂಗಳಲ್ಲಿ ಆಯೋಗ 3,248 ದೂರುಗಳನ್ನು ಆಯೋಗ ಸ್ವೀಕರಿಸಿತ್ತು ಎಂದು ರೇಖಾ ಶರ್ಮಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.