ನವದೆಹಲಿ: ಲೋಕಸಭೆ ಚುನಾವಣೆಗೆ ಬಿಹಾರದಲ್ಲಿ ಎನ್‌ಡಿಎ ಸೀಟು ಹಂಚಿಕೆ ಸೂತ್ರ ಸೋಮವಾರ ಅಂತಿಮವಾಗಿದೆ. ಬಿಜೆಪಿ 17, ಜೆಡಿಯು 16 ಮತ್ತು ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ (ರಾಮ್ ವಿಲಾಸ್) ಐದು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ.

ಎನ್‌ಡಿಎ ಭಾಗವಾಗಿರುವ ಮತ್ತೆರಡು ಮಿತ್ರಪಕ್ಷಗಳಾದ ಹಿಂದೂಸ್ತಾನಿ ಅವಾಮ್ ಮೋರ್ಚಾ (ಎಚ್‌ಎಎಂ) ಮತ್ತು ಉಪೇಂದ್ರ ಕುಶ್ವಾಹ ನೇತೃತ್ವದ ರಾಷ್ಟ್ರೀಯ ಲೋಕ ಮೋರ್ಹಾ ತಲಾ ಒಂದು ಸ್ಥಾನಕ್ಕೆ ಸ್ಪರ್ಧಿಸಲಿವೆ ಎಂದು ಬಿಹಾರದ ಬಿಜೆಪಿ ಚುನಾವಣಾ ಉಸ್ತುವಾರಿ ವಿನೋದ್ ತಾವ್ಡೆ ಇಲ್ಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸೋಮವಾರ ಮಿತ್ರಪಕ್ಷಗಳ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಚಿರಾಗ್ ಪಾಸ್ವಾನ್ ಅವರು ಹಾಜಿಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಬಿಹಾರ ಎಲ್‌ಜೆಪಿ (ರಾಮ್ ವಿಲಾಸ್) ಮುಖ್ಯಸ್ಥ ರಾಜು ತಿವಾರಿ ಹೇಳಿದರು.

ಕೇಂದ್ರ ಸಚಿವ ಪಶುಪತಿ ಪರಾಸ್ ಅವರ ಎಲ್‌ಜೆಪಿ ಬಣವು ಎನ್‌ಡಿಎ ಜತೆ ಸೀಟು ಹಂಚಿಕೆ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ‘ಪರಾಸ್ ಅವರೊಂದಿಗೆ ಮಾತುಕತೆ ನಡೆಯುತ್ತಿದೆ’ ಎಂದು ಬಿಹಾರ ಬಿಜೆಪಿ ಅಧ್ಯಕ್ಷ ಸಾಮ್ರಾಟ್ ಚೌಧರಿ ಹೇಳಿದ್ದಾರೆ.
.LS polls: ಬಂಗಾಳದ DGP, 6 ಗೃಹ ಕಾರ್ಯದರ್ಶಿಗಳ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ.MP Politics: ಕಮಲನಾಥ್ ಆಪ್ತ ಸೇರಿ ‘ಕೈ’ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.