ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್ನಲ್ಲಿ ಸೇನಾ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ ಬಗ್ಗೆ ಎನ್ಡಿಎ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್, ‘ಎನ್ಡಿಎ ಸರ್ಕಾರದ ನೀತಿಗಳು ಕಣಿವೆ ರಾಜ್ಯದಲ್ಲಿ ಶಾಂತಿ ಸ್ಥಾಪಿಸಲು ಮತ್ತು ಅಲ್ಲಿಯ ಜನರಿಗೆ ಭದ್ರತೆಯನ್ನು ಒದಗಿಸಲು ವಿಫಲವಾಗಿದ್ದು, ದಾಳಿಗೆ ತಕ್ಷಣವೇ ಹೊಣೆ ಹೊತ್ತುಕೊಂಡು ಸೇನಾ ಸಿಬ್ಬಂದಿ ಮತ್ತು ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಬೇಕು’ ಎಂದು ಆಗ್ರಹಿಸಿದೆ.

ಘಟನೆಯನ್ನು ಖಂಡಿಸಿ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ‘ಉಗ್ರರ ದಾಳಿಯಲ್ಲಿ ನಮ್ಮ ಯೋಧರು ಮೃತಪಟ್ಟಿರುವುದು ನೋವಿನ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಕೋರಿಕೊಳ್ಳುತ್ತೇನೆ. ಎನ್ಡಿಎ ನೇತೃತ್ವದ ಕೇಂದ್ರ ಸರ್ಕಾರ, ಜಮ್ಮು ಕಾಶ್ಮಿರ ಜನತೆಗೆ ಸುರಕ್ಷತೆ ಒದಗಿಸಲು ಹಾಗೂ ರಾಜ್ಯದಲ್ಲಿ ಶಾಂತಿ ಸ್ಥಾಪಿಸಲು ವಿಫಲವಾಗಿದೆ. ಅಲ್ಲದೆ ಜಮ್ಮು ಕಾಶ್ಮೀರದಲ್ಲಿ ನಿರಂತರವಾಗಿ ಉಗ್ರರು ದಾಳಿ ನಡೆಸುತ್ತಿದ್ದಾರೆ, ಕಣಿವೆ ರಾಜ್ಯದ ಜನರು ಅಪಾಯದ ನೆರಳಿನಲ್ಲಿ ಬದುಕುತ್ತಿದ್ದಾರೆ. ಸರ್ಕಾರ ಕೂಡಲೇ ಹೊಣೆ ಹೊತ್ತು ಜನರ ಭದ್ರತೆಯನ್ನು ಖಚಿತಪಡಿಸಬೇಕು’ ಎಂದು ಬರೆದುಕೊಂಡಿದ್ದಾರೆ.

ಗುರುವಾರ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಮತ್ತು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮೂವರು ಸೈನಿಕರು ಗಾಯಗೊಂಡಿದ್ದಾರೆ.
.ಉಗ್ರರ ದಾಳಿ: ಇಬ್ಬರು ಯೋಧರು ಹುತಾತ್ಮ; ಇಬ್ಬರು ಕಾರ್ಮಿಕರು ಸಾವು.ಜಮ್ಮು ಮತ್ತು ಕಾಶ್ಮೀರ | ನಾಪತ್ತೆಯಾಗಿದ್ದ ಯೋಧನ ಮೃತದೇಹ ಪತ್ತೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.