ಬುಧವಾರ, 3 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎನ್‌ಡಿಎ ಕೂಟದ ಸಂಸದೀಯ ಪಕ್ಷದ ಸಭೆ ನಾಳೆ: ಪ್ರಧಾನಿ ಮೋದಿ ಮಾತನಾಡುವ ಸಾಧ್ಯತೆ

Published 1 ಜುಲೈ 2024, 10:27 IST
Last Updated 1 ಜುಲೈ 2024, 10:27 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸಂಸದೀಯ ಪಕ್ಷದ ಸಭೆ ನಾಳೆ (ಮಂಗಳವಾರ) ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ.

ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡ ಬಳಿಕ ಸಂಸತ್ತಿನ ಮೊದಲ ಅಧಿವೇಶನದಲ್ಲಿ ಆಡಳಿತ ಪಕ್ಷದ ಸಂಸದರನ್ನು ಉದ್ದೇಶಿಸಿ ಅವರ(ಪ್ರಧಾನಿ) ಮೊದಲ ಭಾಷಣ ಇದಾಗಿದೆ.

ಈ ಹಿಂದೆ ಬೇರೆ ಬೇರೆ ಸಂದರ್ಭಗಳಲ್ಲಿ ಪ್ರಧಾನಿ ಮೋದಿ ಅವರು ಎನ್‌ಡಿಎ ಸಂಸದರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮೂರನೇ ಬಾರಿಗೆ ಎನ್‌ಡಿಎಯ ಸಂಸದೀಯ ನಾಯಕನಾಗಿ ಆಯ್ಕೆ ಆದಾಗಲೂ ಅವರು ಮಾತನಾಡಿದ್ದರು. ಸಾಮಾನ್ಯವಾಗಿ ಸಂಸತ್ತಿನ ಅಧಿವೇಶನ ನಡೆಯುವ ಹೊತ್ತಿನಲ್ಲಿ ಪ್ರಧಾನಿ ಮೋದಿ ಅವರು ಬಿಜೆಪಿ ಸಂಸದರನ್ನು ಉದ್ದೇಶಿಸಿ ಮಾತನಾಡುತ್ತಾರೆ.

ಮಂಗಳವಾರ ನಡೆಯಲಿರುವ ಸಭೆಯ ಬಗ್ಗೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಎಲ್ಲಾ ಸಂಸತ್ ಸದಸ್ಯರಿಗೆ ಸೂಚನೆ ನೀಡಲಾಗಿದೆ ಮತ್ತು ಹಾಜರಾಗುವಂತೆ ತಿಳಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದರೆ, ಅದರ ಮಿತ್ರಪಕ್ಷಗಳು 53 ಸ್ಥಾನಗಳನ್ನು ಗೆದ್ದಿವೆ. ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯದ ಕಾರಣ ಸರ್ಕಾರ ರಚನೆಗೆ ತನ್ನ ಮಿತ್ರಪಕ್ಷಗಳ ಮೇಲೆ ಅವಲಂಬಿತವಾಗಿದೆ. ಈ ಹಿನ್ನೆಲೆಯಲ್ಲಿ ಈ ಸಭೆ ಮಹತ್ವದ್ದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT