ನವದೆಹಲಿ: ಮಹಿಳಾ ಪೌರಕಾರ್ಮಿಕರಿಗೆ ಪ್ರತಿ ತಿಂಗಳು ಸ್ಯಾನಿಟರಿ ಪ್ಯಾಡ್ ವಿತರಿಸಲು ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್ಡಿಎಂಸಿ) ನಿರ್ಧರಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಸಾರ್ವಜನಿಕ ಆರೋಗ್ಯ ಹಾಗೂ ಅಭಿವೃದ್ಧಿ ಇಲಾಖೆಯು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಈ ಪ್ರಸ್ತಾವವನ್ನು ಎನ್ಡಿಎಂಸಿ ಮುಂದಿರಿಸಿತ್ತು. ಇದಕ್ಕೆ ಎನ್ಡಿಎಂಸಿ ಅಧ್ಯಕ್ಷರು ಒಪ್ಪಿಗೆ ಸೂಚಿಸಿದ್ದಾರೆ.

‘ಪ್ರಾರಂಭದಲ್ಲಿ ಮುಂದಿನ ಒಂದು ವರ್ಷದ ವರೆಗೆ ಸ್ಯಾನಿಟರಿ ಪ್ಯಾಡ್ ನೀಡಲಾಗುವುದು. ಒಟ್ಟು 640 ಮಹಿಳಾ ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದು, ಇವರಿಗೆ ಉತ್ತಮ ಗುಣಮಟ್ಟದ ಹಾಗೂ ಪರಿಸರ ಸ್ನೇಹಿ ಪ್ಯಾಡ್ ವಿತರಿಸಲಾಗುವುದು’ ಎಂದು ಎನ್ಡಿಎಂಸಿ ಹೇಳಿಕೆಯಲ್ಲಿ ತಿಳಿಸಿದೆ.

ಸಣ್ಣ ವಯಸ್ಸಿನಲ್ಲೇ ಹೆಣ್ಣುಮಕ್ಕಳಿಗೆ ಋತುಚಕ್ರದ ವೇಳೆ ವಹಿಸಬೇಕಾದ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ದೃಷ್ಟಿಯಿಂದ ಎನ್ಡಿಎಂಸಿಯು ತನ್ನ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ ವಿತರಿಸಲೂ ಇದೇ ವೇಳೆ ಒಪ್ಪಿಗೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.