ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಭಾನುವಾರ ಸುರಿದ ಭಾರಿ ಮಳೆಯಿಂದಾಗಿ ಜಲಾವೃತಗೊಂಡ ರೆಸಾರ್ಟ್ನಿಂದ 49 ಮಂದಿಯನ್ನು ರಕ್ಷಿಸಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ಅಧಿಕಾರಿಗಳು ತಿಳಿಸಿದ್ದಾರೆ.

ಭಾರಿ ಮಳೆಯಿಂದಾಗಿ ಶಹಪುರ್ ಪ್ರದೇಶದಲ್ಲಿ ಪ್ರವಾಹದ ಸ್ಥಿತಿ ಉಂಟಾಗಿತ್ತು. ರೆಸಾರ್ಟ್ನಲ್ಲಿ ಸಿಲುಕಿದ್ದ ಜನರನ್ನು ದೋಣಿ ಹಾಗೂ ಲೈಫ್ ಜಾಕೆಟ್ಗಳ ಸಹಾಯದಿಂದ ಎನ್ಡಿಆರ್ಎಫ್ನ ತಂಡವು ರಕ್ಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಗಾರು ಮಳೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎನ್ಡಿಆರ್ಎಫ್ ತಂಡಗಳನ್ನು ನಿಯೋಜಿಸಲಾಗಿದೆ.

ಮುಂಬೈ, ಥಾಣೆ, ಪಾಲ್ಘರ್, ಸತಾರಾ, ಸಾಂಗ್ಲಿ, ಕೊಲ್ಹಾಪುರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ತಲಾ 32ರಿಂದ 35 ಸಿಬ್ಬಂದಿಯ 13 ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
.Assam Floods | ಮುಂದುವರಿದ ಪ್ರವಾಹ: ವರ್ಷದಲ್ಲಿ 70 ಸಾವು.Assam Flood | ತೀವ್ರ ಪ್ರವಾಹ; 24.50 ಲಕ್ಷ ಜನ ಸಂಕಷ್ಟದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.