ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮಂಗಳವಾರ ಕೊನೆಗೊಂಡಿದ್ದು, 7,995 ಅಭ್ಯರ್ಥಿಗಳಿಂದ ಒಟ್ಟು 10,905 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಆಡಳಿತ ಮತ್ತು ವಿರೋಧ ಪಕ್ಷಗಳ ಪ್ರಮುಖ ರಾಜಕೀಯ ಪಕ್ಷಗಳ ಪೈಕಿ ಬಿಜೆಪಿಯು ಅತ್ಯಧಿಕ ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ನಂತರದ ಸ್ಥಾನದಲ್ಲಿ ಕಾಂಗ್ರೆಸ್ ಇದೆ.

‘ಮಹಾಯುತಿ’ ಮೈತ್ರಿಕೂಟದಲ್ಲಿ ಬಿಜೆಪಿಯು148 ಸ್ಥಾನಗಳಿಗೆ ಉಮೇದುವಾರಿಕೆ ಸಲ್ಲಿಸಿದರೆ, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 80 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್ಸಿಪಿಯು 53 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಉಳಿದ ಐದು ಸ್ಥಾನಗಳನ್ನು ಮಹಾಯುತಿ ತನ್ನ ಮಿತ್ರಪಕ್ಷಗಳಿಗೆ ಬಿಟ್ಟುಕೊಟ್ಟಿದೆ.

‘ಮಹಾ ವಿಕಾಸ್ ಅಘಾಡಿ’(ಎಂವಿಎ) ಮೈತ್ರಿಕೂಟದಲ್ಲಿ ಕಾಂಗ್ರೆಸ್ 103 ಅಭ್ಯರ್ಥಿಗಳು, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯ 89 ಅಭ್ಯರ್ಥಿಗಳು ಮತ್ತು ಶರದ್ ಪವಾರ್ ನೇತೃತ್ವದ ಎನ್ಸಿಪಿಯ 87 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಆರು ಸ್ಥಾನಗಳನ್ನು ಎಂವಿಎ ತನ್ನ ಮಿತ್ರಪಕ್ಷಗಳಿಗೆ ಬಿಟ್ಟುಕೊಟ್ಟಿದೆ.

‘ನವೆಂಬರ್ 20ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ 7,995 ಅಭ್ಯರ್ಥಿಗಳು ಒಟ್ಟು 10,905 ನಾಮಪತ್ರಗಳನ್ನು ಸಲ್ಲಿಸಿದ್ದಾರೆ’ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಅಕ್ಟೋಬರ್ 30 ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆಯನ್ನು ಹಿಂಪಡೆಯಲು ನವೆಂಬರ್ 4 ಕೊನೆಯ ದಿನವಾಗಿದೆ.

ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ನ.23ಕ್ಕೆ ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.