ನವದೆಹಲಿ: ‘ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ‘ನೀಟ್’ ಕುರಿತು ಚರ್ಚೆಯಾಗಬೇಕಿದೆ. ಹಾಗಾಗಿ ಸದನದಲ್ಲಿ ಬುಧವಾರ ಚರ್ಚೆಗೆ ಅನುವು ಮಾಡಿಕೊಡಬೇಕು’ ಎಂದು ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಲೋಕಸಭೆ, ರಾಜ್ಯಸಭೆಯಲ್ಲಿ ವಿಷಯದ ಚರ್ಚೆಗೆ ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಒತ್ತಾಯಿಸಿದ ಬೆನ್ನಲ್ಲೇ ರಾಹುಲ್ ಅವರು ಪತ್ರ ಬರೆದಿದ್ದಾರೆ. ಈ ಮಧ್ಯೆ, ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕರಿಸಿದ ನಂತರ ಲೋಕಸಭೆ ಅಧಿವೇಶನವನ್ನು ಅನಿರ್ದಿಷ್ಟ ಅವಧಿಗೆ ಮಂಗಳವಾರ ಮುಂದೂಡಲಾಯಿತು.

ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಶುಕ್ರವಾರ ಮತ್ತು ಸೋಮವಾರ ಚರ್ಚೆಗೆ ಅವಕಾಶ ನಿರಾಕರಿಸಿದ್ದರು. ಆದರೆ, ವಿಷಯ ಪ್ರಸ್ತಾಪಿಸಲು ವಂದನಾ ನಿರ್ಣಯದ ಮೇಲಿನ ಚರ್ಚೆಯ ಅವಕಾಶವನ್ನು ಬಳಸಿಕೊಳ್ಳುವಂತೆ ಅವರು ವಿಪಕ್ಷಗಳ ಸದಸ್ಯರಿಗೆ ಹೇಳಿದ್ದರು.

ರಾಹುಲ್ ಅವರು ಮೋದಿಯವರಿಗೆ ಬರೆದ ಪತ್ರದಲ್ಲಿ, ‘ನೀಟ್ ಸಮಸ್ಯೆಗೆ ವಿದ್ಯಾರ್ಥಿಗಳು ಉತ್ತರ ಬಯಸುತ್ತಿದ್ದಾರೆ. ಸಂಸತ್ತಿನಲ್ಲಿ ಚರ್ಚೆ ನಡೆಸುವುದು ಅವರಲ್ಲಿ ನಂಬಿಕೆಯನ್ನು ಮರುಸ್ಥಾಪಿಸುವ ಮೊದಲ ಹೆಜ್ಜೆಯಾಗಲಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಮ್ಮ ನೇತೃತ್ವದಲ್ಲೇ ಚರ್ಚೆ ನಡೆಯಲಿ’ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

‘ಈ ಸಮಸ್ಯೆ ಬಗೆಹರಿಸಲು ರಚನಾತ್ಮಕ ಚರ್ಚೆಯಲ್ಲಿ ತೊಡಗಿಸಿಕೊಳ್ಳುವುದು ವಿಪಕ್ಷಗಳ ಗುರಿಯಾಗಿದೆ. ದೇಶದಾದ್ಯಂತ 24 ಲಕ್ಷ ಮಂದಿ ನೀಟ್ ಆಕಾಂಕ್ಷಿಗಳ ಒಳಿತು ಬಯಸುವುದೇ ಆಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯು ವಿದ್ಯಾರ್ಥಿಗಳ ಬದುಕಿನ ಕನಸುಗಳನ್ನು ಹೊಸಕಿಹಾಕಿದೆ’ ಎಂದು ಹೇಳಿದ್ದಾರೆ.

‘ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಸಮಸ್ಯೆಗೆ ಪರಿಹಾರಕ್ಕಾಗಿ ಜನಪ್ರತಿನಿಧಿಗಳನ್ನು ಎದುರು ನೋಡುತ್ತಿದ್ದಾರೆ. ನೀಟ್ ಪರೀಕ್ಷೆ ವಿವಾದ ತಕ್ಷಣವೇ ಗಮನ ಹರಿಸಬೇಕಾದ ಗಂಭೀರ ವಿಷಯ. ಕಳೆದ ಏಳು ವರ್ಷಗಳಲ್ಲಿ 70ಕ್ಕೂ ಹೆಚ್ಚು ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿವೆ. ಇದು ಎರಡು ಕೋಟಿಗೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ’ ಎಂದು ಅವರು ಪ್ರಸ್ತಾಪಿಸಿದ್ದಾರೆ.

ಎನ್ಟಿಎ ನಡೆಸಿದ ನೀಟ್–ಯುಜಿ ಪರೀಕ್ಷೆಯು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಕೆಲವು ಆಕಾಂಕ್ಷಿಗಳಿಗೆ ಕೃಪಾಂಕ ನೀಡಿದ್ದರಿಂದ ಸಮಸ್ಯೆಗೆ ಸಿಲುಕಿತ್ತು. ಇದರಿಂದ ಪರೀಕ್ಷೆಯನ್ನು ರದ್ದುಪಡಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.