ನವದೆಹಲಿ: ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿನ ಪರೀಕ್ಷೆಯಲ್ಲಿ (ನೀಟ್–ಯುಜಿ) ತಾರತಮ್ಯ ಇರದಂತೆ ಹಾಗೂ ಪಾರದರ್ಶಕತೆಯನ್ನು ಖಾತ್ರಿಪಡಿಸುವ ವ್ಯವಸ್ಥೆ ರೂಪಿಸಲು ಕ್ರಮಕೈಗೊಳ್ಳುವಂತೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ (ಎನ್‌ಟಿಎ) ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ.

‘ನೀಟ್–ಯುಜಿ’ಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ಮನೋಜ್ ಮಿಶ್ರಾ ಅವರಿದ್ದ ನ್ಯಾಯಪೀಠ ನಡೆಸಿತು.

ಪ್ರವೇಶ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದು ಮಾಡುವಂತಹ ಯಾವುದೇ ಲೋಪ ಕಂಡುಬಂದಿಲ್ಲ. ಆದಾಗ್ಯೂ, ಇಂತಹ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆಯದಂತೆ ಬಿಗಿಯಾದ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ ಎಂದು ನ್ಯಾಯಪೀಠ ಹೇಳಿದೆ.

ಎನ್‌ಟಿಎ, ‘ನೀಟ್–ಯುಜಿ’ಯನ್ನು ನಿರ್ವಹಣೆ ಮಾಡಿದ ವಿಧಾನವು ಕಳವಳಕ್ಕೆ ಕಾರಣವಾಗಿದೆ ಎಂದಿರುವ ನ್ಯಾಯಪೀಠ, ತಜ್ಞರ ಸಮಿತಿಯು ಪರೀಕ್ಷಾ ವ್ಯವಸ್ಥೆಯಲ್ಲಿನ ನ್ಯೂನತೆಗಳನ್ನು ನಿವಾರಣೆ ಮಾಡಬೇಕು ಎಂದಿದೆ.

ಮತ್ತೆ ‘ನೀಟ್–ಯುಜಿ’ ನಡೆಸುವಂತೆ ಆದೇಶಿಸಲು ಜುಲೈ 23ರಂದು ನೀಡಿದ್ದ ಆದೇಶದಲ್ಲಿ ನ್ಯಾಯಪೀಠ, ಹಲವಾರು ಸೂಚನೆಗಳನ್ನು ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.