ನವದೆಹಲಿ: ಭಾರತದ ಪ್ರಪಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ಪುಣ್ಯತಿಥಿಯ ಅಂಗವಾಗಿ ಇಲ್ಲಿನ ಶಾಂತಿವನಕ್ಕೆ ಭೇಟಿ ನೀಡಿದ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಮುಖರು ನೆಹರು ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು.

ಇವರೊಂದಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸ್ವತಂತ್ರ ಭಾರತದ ಮೊದಲ ಪ್ರಧಾನಿಯಾಗಿ 1947ರಲ್ಲಿ ಅಧಿಕಾರ ವಹಿಸಿಕೊಂಡ ಜವಾಹರ್ ಲಾಲ್ ನೆಹರು ಕಾಂಗ್ರೆಸ್ ಪಕ್ಷದಿಂದ ಸತತವಾಗಿ 17 ವರ್ಷಗಳ ಕಾಲ ಆಡಳಿತ ನಡೆಸಿದರು. ಉತ್ತರ ಪ್ರದೇಶದ ಅಲಹಾಬಾದ್ನಲ್ಲಿ 1889ರ ನವೆಂಬರ್ 14ರಂದು ಜನಿಸಿದ ನೆಹರು, ರಾಷ್ಟ್ರ ಮುಂದುವರಿಯಬೇಕಾದರೆ ಕೈಗಾರಿಕೆಗಳಿಗೆ ಹೆಚ್ಚಿನ ಒತ್ತು ನೀಡಬೇಕೆಂದು ಪ್ರತಿಪಾದಿಸಿದ್ದರು. ಅದೇ ರೀತಿ ಹಲವು ಕೈಗಾರಿಕೆಗಳನ್ನು ಭಾರತದಲ್ಲಿ ಸ್ಥಾಪಿಸಿದರು. ಹಲವು ನೀರಾವರಿ ಯೋಜನೆಗಳನ್ನು ಜಾರಿಗೆ ತಂದ ಅವರು ಬಡತನ, ನಿರ್ಮೂಲನೆ ಹಾಗೂ ನಿರುದ್ಯೋಗ ಸಮಸ್ಯೆಗೆ ಹೆಚ್ಚು ಹೆಚ್ಚು ಕೈಗಾರಿಕೆಗಳನ್ನು ಸ್ಥಾಪಿಸಬೇಕು ಎಂದಿದ್ದರು. 1964ರ ಮೇ 27ರಂದು ದೆಹಲಿಯ ಅವರ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ಅವರು ನಿಧನರಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.