ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನೆಹರೂ ಸ್ಮಾರಕ ಮ್ಯೂಸಿಯಂ ಇನ್ನು ಪ್ರಧಾನ ಮಂತ್ರಿ ಮ್ಯೂಸಿಯಂ: ಅಧಿಕೃತ ಮರುನಾಮಕರಣ

Published : 16 ಆಗಸ್ಟ್ 2023, 4:46 IST
Last Updated : 16 ಆಗಸ್ಟ್ 2023, 4:46 IST
ಫಾಲೋ ಮಾಡಿ
Comments
ತೀನ್‌ ಮೂರ್ತಿ ಭವನ
ಬ್ರಿಟಿಷರ ಆಳ್ವಿಕೆ ವೇಳೆ ನಿರ್ಮಿಸಲಾಗಿರುವ ತೀನ್‌ ಮೂರ್ತಿ ಭವನ, ದೇಶ ಸ್ವಾತಂತ್ರ್ಯ ಪಡೆದ ನಂತರ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ ಅಧಿಕೃತ ನಿವಾಸವಾಗಿತ್ತು. ನೆಹರೂ ಅವರು ಈ ನಿವಾಸದಲ್ಲಿ 16 ವರ್ಷಗಳಿಗೂ ಹೆಚ್ಚು ಕಾಲ ವಾಸವಾಗಿದ್ದರು. ನೆಹರೂ ಅವರ 75ನೇ ಜನ್ಮದಿನದ ನೆನಪಿಗಾಗಿ 1964ರಲ್ಲಿ ಈ ಭವನದಲ್ಲಿ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸ್ಥಾಪಿಸಿ, ಸಮರ್ಪಿಸಲಾಯಿತು. ನಂತರ ಇದಕ್ಕೆ ಸ್ವಾಯತ್ತ ಸ್ಥಾನಮಾನ ನೀಡಲಾಯಿತು. ಇದರ ಅಂಗವಾಗಿ 1966ರ ಏಪ್ರಿಲ್ 1ರಂದು ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆಯನ್ನು ಸ್ಥಾಪಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT