ಉನ್ನಾವೊ: ಕಾಂಗ್ರೆಸ್ ಪಕ್ಷವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕೊಲೆ ಮಾಡಿಸಿದೆ ಎಂದು ಹೇಳುವ ಮೂಲಕ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಹೊಸ ವಿವಾದ ಹುಟ್ಟುಹಾಕಿದ್ದಾರೆ.

ಉತ್ತರ ಪ್ರದೇಶದ ಉನ್ನಾವೊದಲ್ಲಿ ಬೋಸ್ ಜನ್ಮದಿನಾಚರಣೆ ಅಂಗವಾಗಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಕ್ಷಿ ಮಹಾರಾಜ್, 'ಕಾಂಗ್ರೆಸ್ ಪಕ್ಷವು ಸುಭಾಷ್ ಚಂದ್ರ ಬೋಸ್ ಅವರನ್ನು ಕೊಂದಿದೆ ಎಂಬುದು ನನ್ನ ಆರೋಪವಾಗಿದೆ. ಬೋಸ್ ಅವರ ಜನಪ್ರಿಯತೆಯ ಮುಂದೆ ಮಹಾತ್ಮ ಗಾಂಧೀಜಿ ಮತ್ತು ಪಂಡಿತ್ ನೆಹರೂ ಅವರಿಗೆ ನಿಲ್ಲಲು ಸಾಧ್ಯವಾಗಿರಲಿಲ್ಲ' ಎಂದು ಹೇಳಿದ್ದಾರೆ.

‘ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸುಭಾಷ್ ಚಂದ್ರ ಬೋಸ್ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಸಾವು ಇನ್ನೂ ನಿಗೂಢವಾಗಿರುವುದು ಏಕೆ? ಅವರ ಸಾವಿನ ವಿಚಾರಣೆಯನ್ನು ಯಾಕೆ ನಡೆಸಲಿಲ್ಲ? ಅವರ ಸಾವಿನ ಬಗ್ಗೆ ಸತ್ಯ ಹೊರಬರಲಿ' ಎಂದು ಸಾಕ್ಷಿ ಮಹಾರಾಜ್ ತಿಳಿಸಿದ್ದಾರೆ.

1897 ರ ಜನವರಿ 23 ರಂದು ಜನಿಸಿದ ಬೋಸ್ ಅವರ ಜನ್ಮದಿನಾಚರಣೆಯ ನೆನಪಿಗಾಗಿ ಪ್ರತಿವರ್ಷ ದೇಶದಲ್ಲಿ ಜನವರಿ 23 ಅನ್ನು 'ಪರಾಕ್ರಮ ದಿವಸ್' ಎಂದು ಆಚರಿಸಲು ಸರ್ಕಾರ ನಿರ್ಧರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.