ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸಂಬಂಧಿ ಚಂದ್ರ ಬೋಸ್ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಚಂದ್ರ ಬೋಸ್ ಅವರು 2016ರಲ್ಲಿ ಬಿಜೆಪಿ ಸೇರಿದ್ದರು. 2016ರಲ್ಲಿ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಾಗೂ 2019ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಈ ಎರಡು ಚುನಾವಣೆಗಳಲ್ಲಿ ಅವರು ಪರಾಭವಗೊಂಡಿದ್ದರು.

ದೇಶದಾದ್ಯಂತ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸಮಗ್ರ ಸಿದ್ದಾಂತವನ್ನು ಪ್ರಚಾರ ಮಾಡಲು ನನಗೆ ಅನುಮತಿ ನೀಡಲಾಗುವುದೆಂದು ಭರವಸೆ ನೀಡಲಾಗಿತ್ತು. ಆದರೆ, ಈವರೆಗೂ ಅಂಥ ಯಾವುದೇ ಅನುಮತಿ ದೊರೆತಿಲ್ಲ. ಹಾಗಾಗಿ ಬಿಜೆಪಿಗೆ ರಾಜೀನಾಮೆ ನೀಡಿದ್ದೇನೆ ಎಂದು ಚಂದ್ರ ಬೋಸ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.