ನವದೆಹಲಿ: ಸಕಾರಣ ಮತ್ತು ಪೂರ್ವಸೂಚನೆ ಇಲ್ಲದೆ ಪತ್ನಿಗೆ ವಿಚ್ಛೇದನ ನೀಡುವುದು ಮುಸ್ಲಿಂ ಪತಿಯ ವಿವೇಚನೆಯಾಗಿದೆ (ತಲಾಖ್ ಉಲ್ ಸುನ್ನತ್) ಎಂಬುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಮಾಡಿದೆ. ಸಂಸತ್ತು ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಾಯ್ದೆ ರೂಪಿಸಿದೆ ಎಂದೂ ಕೋರ್ಟ್ ತಿಳಿಸಿದೆ.

ಈ ಅರ್ಜಿಯು ಪೂರ್ಣವಾಗಿ ತಪ್ಪುಗ್ರಹಿಕೆಯಿಂದ ಕೂಡಿದ್ದಾಗಿದೆ. ಹೀಗಾಗಿ, ಅರ್ಜಿಯು ವಿಚಾರಣೆಗೆ ಅರ್ಹವಾದುದಲ್ಲ ಎಂದು ನ್ಯಾಯಮೂರ್ತಿ ವಿಪಿನ್ ಸಂಘಿ ಮತ್ತು ಜಸ್ಮೀತ್ ಸಿಂಗ್ ಅವರಿದ್ದ ಪೀಠ ಹೇಳಿತು.

ಸಂಸತ್ತು ಈಗಾಗಲೇ ಮುಸ್ಲಿಂ ಮಹಿಳೆ (ವೈವಾಹಿಕ ಹಕ್ಕುಗಳ ರಕ್ಷಣೆ) ಕಾಯ್ದೆ 2019 ಅನ್ನು ರೂಪಿಸಿದೆ. ಈ ಕಾರಣದಿಂದ ಅರ್ಜಿಯನ್ನು ವಜಾ ಮಾಡಲಾಗಿದೆ ಎಂದು ಹೇಳಿತು.

ಉಲ್ಲೇಖಿತ ಕಾಯ್ದೆ ಸೆಕ್ಷನ್ 3ರ ಪ್ರಕಾರ, ಮುಸ್ಲಿಂ ಪತಿ ತನ್ನ ಪತ್ನಿಗೆ ಲಿಖಿತವಾಗಿ, ಮೌಖಿಕವಾಗಿ ಅಥವಾ ವಿದ್ಯುನ್ಮಾನ ಸ್ವರೂಪದಲ್ಲಿ ನೀಡುವ ತಲಾಖ್ ಅನೂರ್ಜಿತವಾಗಲಿದ್ದು, ಕಾನೂನುಬಾಹಿರವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.