ಲಖನೌ: ನರೇಂದ್ರ ಮೋದಿ ನೇತೃತ್ವದ ಹೊಸ ಎನ್‌ಡಿಎ ಸರ್ಕಾರ ಅಸ್ಥಿರ ಸ್ಥಿತಿಯಲ್ಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಎಂದು ಹೇಳಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮದಲ್ಲಿ ಎಕ್ಸ್ ಮಾಡಿದ್ದು ಈ ಸರ್ಕಾರ ಅಸ್ಥಿರ ಸ್ಥಿತಿಯಲ್ಲಿ ಇರಲಿದೆ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಅವರು ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಹಿಂದಿನ ಎರಡು ಅವಧಿಗಳಲ್ಲಿ, ಬಿಜೆಪಿ ಸಂಪೂರ್ಣ ಬಹುಮತವನ್ನು ಪಡೆಯುವ ಮೂಲಕ ಸರ್ಕಾರವನ್ನು ರಚಿಸಿತ್ತು. ಆದರೆ, ಈ ಬಾರಿ ಬಿಜೆಪಿಗೆ ಪೂರ್ಣ ಬಹುಮತ ಸಿಕ್ಕಿಲ್ಲ.

ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಇಂಡಿಯಾ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿದ್ದು ಉತ್ತರ ಪ್ರದೇಶದಲ್ಲಿ 80 ಸ್ಥಾನಗಳ ಪೈಕಿ 37 ಸ್ಥಾನಗಳನ್ನು ಗೆದ್ದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.