ಜೈಪುರ: ರಾಜಸ್ಥಾನದ ನೂತನ ಮುಖ್ಯಮಂತ್ರಿ ಭಜನ್ ಲಾಲ್ ಅವರು, ವೇದಮಂತ್ರಗಳ ಪಠಣದ ನಡುವೆ ಮುಖ್ಯಮಂತ್ರಿ ಕಚೇರಿ ಪ್ರವೇಶಿಸಿ ಅಧಿಕಾರ ಸ್ವೀಕರಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸಿಪಿ ಜೋಶಿ, ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಅರ್ಜುನ್ ಮೇಘವಾಲ್, ಕೈಲಾಶ್ ಚೌಧರಿ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ಮಾಜಿ ವಿಪಕ್ಷ ನಾಯಕ ರಾಜೇಂದ್ರ ರಾಥೋಡ್, ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಸತೀಶ್ ಪೂನಿಯಾ, ನೂತನ ಶಾಸಕರು ಮತ್ತು ಮಾಜಿ ಸಂಸದರಾದ ರಾಜ್ಯವರ್ಧನ್ ರಾಥೋಡ್ ಹಾಗೂ ಕಿರೋಡಿ ಮೀನಾ ಮುಖ್ಯಮಂತ್ರಿ ಕಚೇರಿಯಲ್ಲಿ ಉಪಸ್ಥಿತರಿದ್ದರು.

ಈ ಮೊದಲು ಅವರಲ್ಲಿ ಬಹುತೇಕ ನಾಯಕರು ಮುಖ್ಯಮಂತ್ರಿ ಸ್ಥಾನದ ರೇಸ್ನಲ್ಲಿದ್ದರು. ಡಿಸೆಂಬರ್ 12 ರಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೊದಲ ಬಾರಿಗೆ ಶಾಸಕರಾಗಿರುವ ಭಜನ್ ಲಾಲ್ ಅವರನ್ನು ಶಾಸಕಾಂಗ ನಾಯಕನಾಗಿ ಆಯ್ಕೆ ಮಾಡಲಾಗಿತ್ತು.

ಶರ್ಮಾ ಅವರು ಸಿಎಂ ಕುರ್ಚಿಯ ಮೇಲೆ ಕುಳಿತುಕೊಳ್ಳುತ್ತಿದ್ದಂತೆ ರಾಜೇ ಅವರು ತಲೆಯ ಮೇಲೆ ಕೈ ಇಟ್ಟು ಆಶೀರ್ವಾದ ಮಾಡಿದರು. ಬಳಿಕ, ಶರ್ಮಾ ಎದ್ದು ನಿಂತು ರಾಜೇ ಮತ್ತು ಇತರರಿಗೆ ಸಿಹಿ ಹಂಚಿದರು.

ಉಪಮುಖ್ಯಮಂತ್ರಿಗಳಾದ ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ, ರಾಜಸ್ಥಾನ ವಿಧಾನಸಭೆಯ ನೂತನ ಸ್ಪೀಕರ್ ಆಗಿ ನೇಮಕಗೊಂಡಿರುವ ವಾಸುದೇವ್ ದೇವನಾನಿ ಮತ್ತು ಹಲವು ಶಾಸಕರು ಹಾಗೂ ಇತರ ನಾಯಕರು ಸಿಎಂಒದಲ್ಲಿ ಉಪಸ್ಥಿತರಿದ್ದರು.

ಇದಕ್ಕೂ ಮುನ್ನ, ಉಪ ಮುಖ್ಯಮಂತ್ರಿಗಳಾದ ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಕೂಡ ತಮ್ಮ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದರು.
.ಸರಪಂಚನಿಂದ ಸಿಎಂವರೆಗೆ: ರಾಜಸ್ಥಾನ ಸಿಎಂ ಭಜನ್ ಲಾಲ್ ನಡೆದುಬಂದ ಹಾದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.