ಪಶ್ಚಿಮ ಬಂಗಾಳ: ಇತ್ತೀಚೆಗೆ ನಡೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯೊಬ್ಬರನ್ನು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ.

24 ಪರಗಣ ಜಿಲ್ಲೆಯ ಮಗ್ರಾಹತ್ನಲ್ಲಿ ಶುಕ್ರವಾರ ತಡ ರಾತ್ರಿ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಮಗ್ರಾಹತ್ನ ಪೂರ್ವ ಗ್ರಾಮ ಪಂಚಾಯತಿ ಸದಸ್ಯ ಮೈಮೂರ್ ಘರಾಮಿ ಎಂದು ಗುರುತಿಸಲಾಗಿದ್ದು, ಶಜಾಹಾನ್ ಮೊಲ್ಹಾ ಎನ್ನುವ ವ್ಯಕ್ತಿ ಗಾಯಗೊಂಡಿದ್ದಾನೆ.

ಘಟನೆ ನಡೆದ ಪ್ರದೇಶದ ಸುತ್ತಮುತ್ತ ಪೊಲೀಸ್ ಬಿಗಿಭದ್ರತೆ ಕೈಗೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಹತ್ಯೆ ರಾಜಕೀಯ ಪ್ರೇರಿತವಾಗಿ ನಡೆದಿದೆಯೇ ಎನ್ನುವುದು ತನಿಖೆಯಿಂದ ತಿಳಿಯಬೇಕಿದೆ ಎಂದು ಡೈಮಂಡ್ ಹಾರ್ಬರ್ ಉಪವಿಭಾಗದ ಪೊಲೀಸ್ ಅಧಿಕಾರಿ ಮಿಥುನ್ ದೆಯ್ ಮಾಹಿತಿ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ಹಿಂಸಾಚಾರದ ನಡುವೆ ಪಶ್ಚಿಮ ಬಂಗಾಳದಲ್ಲಿ ನಡೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ತೃಣ ಮೂಲ ಕಾಂಗ್ರೆಸ್ ಗೆಲುವು ಸಾಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.