ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ವಾಯು ಮಾಲಿನ್ಯವನ್ನು ತಡೆಗಟ್ಟಲು ದೀಪಾವಳಿಯಂದು ಪಟಾಕಿಯನ್ನು ಸಿಡಿಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಆದರೆ ಅಲ್ಲಿಯ ನಾಗರಿಕರು ನಿಯಮ ಉಲ್ಲಂಘನೆ ಮಾಡಿದ್ದು ಭಾನುವಾರ ರಾತ್ರಿ ಹೆಚ್ಚು ಪಟಾಕಿ ಸಿಡಿಸಿದ್ದಾರೆ. ಪಟಾಕಿಗಳ ಮೇಲಿನ ನಿಷೇಧವನ್ನು ಉಲ್ಲಂಘಿಸಲು ಬಿಜೆಪಿ ಜನರನ್ನು ಪ್ರೋತ್ಸಾಹಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಪರಿಸರ ಸಚಿವ ಗೋಪಾಲ್ ರೈ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.