ನವದೆಹಲಿ: ದೆಹಲಿಯ ಆಸುಪಾಸಿನ ನಗರಗಳು (ಎನ್ಸಿಆರ್) ಸೇರಿದಂತೆ ದೇಶದ ಯಾವ ನಗರ ಮತ್ತು ಪಟ್ಟಣಗಳಲ್ಲಿ ಗಾಳಿಯ ಗುಣಮಟ್ಟ ಕಳಪೆಯಾಗಿದೆಯೋ, ಅಲ್ಲೆಲ್ಲ ಕೋವಿಡ್ 19 ಸಾಂಕ್ರಾಮಿಕದ ಸಮಯದಲ್ಲಿ ಎಲ್ಲ ವಿಧದ ಪಟಾಕಿ ಮಾರಾಟ ಮತ್ತು ಬಳಕೆಯ ಮೇಲೆ ನಿಷೇಧ ಹೇರುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯೆಲ್ ನೇತೃತ್ವದ ಪೀಠ ನೀಡಿರುವ ಈ ನಿರ್ದೇಶನದಲ್ಲಿ ಗಾಳಿಯ ಗುಣಮಟ್ಟ ಮಧ್ಯಮಕ್ಕಿಂತ ಕಡಿಮೆ ಇರುವ ನಗರಗಳಲ್ಲಿ ಎರಡು ಗಂಟೆಗಳಿಗಿಂತ ಹೆಚ್ಚು ಕಾಲ ಹಸಿರು ಪಟಾಕಿಗಳನ್ನು ಹೊಡೆಯುವಂತಿಲ್ಲ ಎಂಬ ನಿಬಂಧನೆಯನ್ನು ಉಲ್ಲೇಖಿಸಿದೆ.

ಗಾಳಿಯ ಗುಣಮಟ್ಟ ಮಧ್ಯಮ ಹಂತದಲ್ಲಿರುವ ನಗರ/ಪಟ್ಟಣದಂತಹ ಪ್ರದೇಶಗಳಲ್ಲಿಕ್ರಿಸ್ಮಸ್, ಹೊಸ ವರ್ಷಾಚರಣೆ ಸಂದರ್ಭದಲ್ಲಿ ರಾತ್ರಿ 11.55 ರಿಂದ 12.30ರವರೆಗೆ ಹಸಿರು ಪಟಾಕಿಗಳನ್ನು ಹೊಡೆಯಬಹುದೆಂದು ಎನ್ಜಿಟಿ ತಿಳಿಸಿದೆ.

ಈ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿರುವ ಪೀಠ, ನಿಷೇಧಿತ ಪಟಾಕಿಗಳ ಮಾರಾಟವಾಗುತ್ತಿದ್ದರೆ ಅವುಗಳನ್ನು ವಶಪಡಿಸಿಕೊಳ್ಳಬೇಕು. ಕಾನೂನು ಉಲ್ಲಂಘಿಸಿದವರಿಗೆ ದಂಡ ಹಾಕಬೇಕು‘ಎಂದು ಹೇಳಿದೆ. ಮಾಲಿನ್ಯದ ತೊಂದರೆಗೊಳಾದವರು ಪರಿಹಾರಕ್ಕಾಗಿ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪೀಠ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.