ನವದೆಹಲಿ: ಇಂದೋರ್‌ನಲ್ಲಿ ಮಹಿಳೆಯೊಬ್ಬರು ಐವರು ಮಕ್ಕಳನ್ನು ಭಿಕ್ಷಾಟನೆಗೆ ಒಳಪಡಿಸಿ ಆಸ್ತಿ ಗಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಧ್ಯಪ್ರದೇಶ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ನೋಟಿಸ್ ಜಾರಿ ಮಾಡಿದೆ.

‘ಪ್ರಕರಣದಲ್ಲಿ ಸಂತ್ರಸ್ತರಾಗಿರುವ ಅಪ್ರಾಪ್ತ ವಯಸ್ಸಿನ ಮಕ್ಕಳ ಕಾಳಜಿಗೆ ಕೈಗೊಂಡಿರುವ ಕ್ರಮ ಮತ್ತು ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ವಾರಗಳ ಒಳಗಾಗಿ ವರದಿ ನೀಡುವಂತೆ ಸೂಚಿಸಲಾಗಿದೆ. ವರದಿಯಲ್ಲಿ ಭಿಕ್ಷಾಟನೆ ವಿರೋಧಿ ಕಾನೂನನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಇಂತಹ ಪ್ರಕರಣಗಳು ಮರುಕಳಿಸದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಉಲ್ಲೇಖಿಸುವಂತೆ ತಿಳಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳೆಯೊಬ್ಬರು 2,3,7,8 ಮತ್ತು 10 ವರ್ಷ ವಯಸ್ಸಿನ ಐವರು ಮಕ್ಕಳನ್ನು ಭಿಕ್ಷಾಟನೆಗೆ ಕಳುಹಿಸಿ, ನಿವೇಶನ, ಮನೆ, ದ್ವಿಚಕ್ರ ವಾಹನ 20,000 ಮೌಲ್ಯದ ಮೊಬೈಲ್ ಮತ್ತು ₹2.5 ಲಕ್ಷ ಗಳಿಸಿರುವ ಬಗೆಗಿನ ಮಾಧ್ಯಮ ವರದಿಯೊಂದರ ಆಧಾರದಲ್ಲಿ ಎನ್‌ಎಚ್‌ಆರ್‌ಸಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.