ನವದೆಹಲಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕೆ ಸಹಕಾರಿಯಾಗುವ ಮಾಹಿತಿ ನೀಡಿದವರಿಗೆ ತಲಾ ₹10 ಲಕ್ಷ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ ) ಶುಕ್ರವಾರ ಘೋಷಿಸಿದೆ.

ಪ್ರಕರಣದ ಪ್ರಮುಖ ಆರೋಪಿಗಳಾದ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಅಬ್ದುಲ್ ಮಥೀನ್ ಅಹ್ಮದ್ ತಾಹ ಪತ್ತೆಗೆ ಸಹಕಾರಿಯಾಗಬಲ್ಲ ಸುಳಿವಿದ್ದಲ್ಲಿ ಹಂಚಿಕೊಳ್ಳುವಂತೆ ಎನ್ಐಎ ಎಕ್ಸ್ನಲ್ಲಿ ಕೋರಿದೆ. ಅಲ್ಲದೇ ಮಾಹಿತಿ ನೀಡಿದವರ ವಿವರಗಳನ್ನು ಗೌಪ್ಯವಾಗಿರಿಸಲಾಗುವುದು ಎಂದು ತಿಳಿಸಿದೆ.

ಸ್ಫೋಟ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿರುವ ಎನ್ಐಎ ಅಧಿಕಾರಿಗಳು, ಪ್ರಮುಖ ಸಂಚುಕೋರ ಎನ್ನಲಾದ ಮುಜಮೀಲ್ ಶರೀಫ್ನನ್ನು ಈಗಾಗಲೇ ಬಂಧಿಸಿದ್ದಾರೆ.
.ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಶಂಕಿತ ಮಾಝ್ ಮುನೀರ್ ಅಹ್ಮದ್ ವಶಕ್ಕೆ.
ಚಿಕ್ಕಮಗಳೂರು ದುಬೈನಗರದ ಮುಜಮೀಲ್, ಕೆಫೆಯಲ್ಲಿ ಬಾಂಬ್ ಇರಿಸಿದ್ದ ಶಂಕಿತ ಹಾಗೂ ಇತರರ ಜೊತೆ ಸೇರಿ ಸಂಚು ರೂಪಿಸಿದ್ದ. ಕೆಲ ಪುರಾವೆಗಳನ್ನು ಆಧರಿಸಿ ಮುಜಮೀಲ್ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಈತನೇ ಪ್ರಮುಖ ಸಂಚುಕೋರ ಎಂಬುದು ಗೊತ್ತಾಗಿದೆ. ಈತನನ್ನು ಬುಧವಾರ ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ಮುಂದುವರಿಸಲಾಗಿದೆ ಎಂದು ಎನ್ಐಎ ಮೂಲಗಳು ತಿಳಿಸಿವೆ.

ಬ್ರೂಕ್ಫೀಲ್ಡ್ನಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಬಾಂಬ್ ಸ್ಫೋಟವಾಗಿತ್ತು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು.
.ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಪ್ರಮುಖ ಸಂಚುಕೋರ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.