ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬಂಧನಕ್ಕೆ ನೆರವಾಗುವ ಮಾಹಿತಿ ಕೊಟ್ಟವರಿಗೆ ₹25 ಲಕ್ಷ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಘೋಷಿಸಿದೆ.

ದಾವೂದ್ ಇಬ್ರಾಹಿಂ 1993ರ ಮುಂಬೈ ಸರಣಿ ಬಾಂಬ್ ದಾಳಿಯ ರೂವಾರಿಯಾಗಿದ್ದಾನೆ.

ಇದನ್ನೂ ಓದಿ:ಜಮ್ಮು ಮತ್ತು ಕಾಶ್ಮೀರ ಎನ್ಕೌಂಟರ್: ಇಬ್ಬರು ಜೆಇಎಂ ಉಗ್ರರ ಹತ್ಯೆ

ಅದೇ ಹೊತ್ತಿಗೆ ದಾವೂದ್ ಆಪ್ತ ಸಹಾಯಕ ಶಕೀಲ್ ಶೇಖ್ ಅಲಿಯಾಸ್ ಛೋಟಾ ಶಕೀಲ್ ಬಂಧನಕ್ಕೆ ನೆರವಾಗುವ ಮಾಹಿತಿ ಕೊಟ್ಟವರಿಗೆ ₹20 ಲಕ್ಷ ನಗದು ಬಹುಮಾನ ಘೋಷಿಸಿದೆ.

ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ 'ವಾಂಟೆಡ್' ಲಿಸ್ಟ್ನಲ್ಲಿರುವ ದಾವೂದ್ ಸಹಚರರಾದ ಹಾಜಿ ಅನೀಸ್ ಅಲಿಯಾಸ್ ಅನೀಸ್ ಇಬ್ರಾಹಿಂ ಶೇಖ್, ಜಾವೇದ್ ಪಟೇಲ್ ಅಲಿಯಾಸ್ ಜಾವೇದ್ ಚಿಕ್ನಾ ಮತ್ತು ಇಬ್ರಾಹಿಂ ಮುಷ್ತಾಕ್ ಅಬ್ದುಲ್ ರಜಾಕ್ ಮೆಮೊನ್ ಅಲಿಯಾಸ್ ಟೈಗರ್ ಮೆಮೊನ್ ಬಂಧನ ಮಾಹಿತಿಗೆ ತಲಾ ₹15 ಲಕ್ಷ ನಗದು ಘೋಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.