ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಎಲ್‌ಟಿಟಿಇ ಬೆಂಬಲಿಗರಿಂದ ದಾಳಿಗೆ ಸಂಚು: ಎನ್‌ಐಎ ಶೋಧ

Last Updated 9 ಅಕ್ಟೋಬರ್ 2022, 14:24 IST
ಅಕ್ಷರ ಗಾತ್ರ

ನವದೆಹಲಿ: ವಾಣಿಜ್ಯ ಸಂಸ್ಥೆಗಳು ಮತ್ತು ಪ್ರಮುಖ ನಾಯಕರ ಮೇಲೆ ದಾಳಿ ನಡೆಸಲು ಇಬ್ಬರು ಎಲ್‌ಟಿಟಿಇ ಬೆಂಬಲಿಗರು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್ಐಎ) ತಮಿಳುನಾಡಿನ ಎರಡು ಕಡೆ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಸೇಲಂ ಮತ್ತು ಶಿವಗಂಗೈ ಜಿಲ್ಲೆಯ ಎರಡು ಕಡೆ ಶೋಧ ಕಾರ್ಯ ನಡೆಸಿದ ಎನ್‌ಐಎ ಅಧಿಕಾರಿಗಳು ಶ್ರೀಲಂಕಾ ಮೂಲದ ನಿಷೇಧಿತ ಎಲ್‌ಟಿಟಿಇ ಸಂಘಟನೆಗೆ ಸಂಬಂಧಿಸಿದ ಪುಸ್ತಕಗಳು, ಫೊಟೊಗಳು, ಸಿ.ಡಿಗಳು ಮತ್ತು ಡಿಜಿಟಲ್‌ ಸಾಧನಗಳನ್ನು ವಶಕ್ಕೆ ಪಡೆದಿದ್ದಾರೆ ಎಂದೂ ಹೇಳಿದ್ದಾರೆ.

ಈ ಇಬ್ಬರು ಎಲ್‌ಟಿಟಿಇ ಬೆಂಬಲಿಗರ ವಿರುದ್ಧ ಮೇ 19ರಂದು ಒಮಲೂರ್‌ ‍ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜುಲೈ 25ರಂದು ಎನ್‌ಐಎ ಪ್ರಕರಣ ದಾಖಲಿಸಿಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT