ಶ್ರೀನಗರ: ಭಯೋತ್ಪಾದಕರಿಗೆ ಆರ್ಥಿಕ ನೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಎಂಟು ಸ್ಥಳಗಳಲ್ಲಿ ದಾಳಿ ನಡೆಸಿದೆ.

ಕಾಶ್ಮೀರದ ಏಳು ಸ್ಥಳಗಳಲ್ಲಿ ಮತ್ತು ಜಮ್ಮುವಿನ ಒಂದು ಸ್ಥಳದಲ್ಲಿ ಸ್ಥಳೀಯ ಪೊಲೀಸರು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಜಂಟಿಯಾಗಿ ದಾಳಿ ನಡೆಸಿದ್ದು, ಶೋಧ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಶೋಪಿಯಾನ್ ಮತ್ತು ಬಾರಾಮುಲ್ಲಾ ಸೇರಿದಂತೆ ಇತರ ಪ್ರದೇಶಗಳಲ್ಲಿ ಶಂಕಿತರ ನಿವಾಸಿಗಳು ಮತ್ತು ಇತರ ಅಡಗುತಾಣಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾಶ್ಮೀರದಲ್ಲಿ ಸಕ್ರಿಯವಾಗಿರುವ ಉಗ್ರಗಾಮಿಗಳಿಗೆ ಡ್ರೋನ್‌ಗಳ ಮೂಲಕ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದ ಆರೋಪದ ಮೇಲೆ ಎನ್‌ಐಎ ಇತ್ತೀಚೆಗೆ ಪಾಕ್ ಬೆಂಬಲಿತ ಆರೋಪಿಯೊಬ್ಬನನ್ನು ಬಂಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.