ಸೋಮವಾರ, 1 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗುವಾಹಟಿ ವಿ.ವಿ ಅಂಕಪಟ್ಟಿ ಅಕ್ರಮ: 9 ಜನರ ಬಂಧನ

Published 29 ಜೂನ್ 2024, 13:13 IST
Last Updated 29 ಜೂನ್ 2024, 13:13 IST
ಅಕ್ಷರ ಗಾತ್ರ

ಬಾರಪೇಟ (ಅಸ್ಸಾಂ): ಗುವಾಹಟಿ ವಿಶ್ವವಿದ್ಯಾಲಯದಲ್ಲಿ ನಡೆದಿದೆ ಎನ್ನಲಾದ ಅಂಕಪಟ್ಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಸೇರಿದಂತೆ ಒಟ್ಟು ಒಂತ್ತು ಮಂದಿಯನ್ನು ಬಂಧಿಸಲಾಗಿದೆ.

‘ಗುವಾಹಟಿ, ಬಾರಪೇಟ ಮತ್ತು ಧುಬ್ರಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸ್‌ ಮೂಲಗಳು ಶುಕ್ರವಾರ ತಿಳಿಸಿವೆ.

ಮುಖ್ಯಮಂತ್ರಿ ಹಿಮಂತ ಬಿಸ್ವಾ ಅವರು ಗುರುವಾರ ಬಾರಪೇಟದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ಅಂಕಪಟ್ಟಿ ಅಕ್ರಮದ ಬಗ್ಗೆ ಬಹಿರಂಗಪಡಿಸಿದರು. 

‘ಗಣಕೀಕೃತ ಅಂಕಪಟ್ಟಿ ನಿರ್ವಹಣೆ ಮಾಡುವವರು, ಹಣ ನೀಡಿದವರಿಗೆ ಹೆಚ್ಚು ಅಂಕಗಳನ್ನು ನೀಡುತ್ತಿದ್ದಾರೆ. ನಿರ್ವಾಹಕರು ಸುಲಭವಾಗಿ ಅಂಕಗಳನ್ನು ಹೆಚ್ಚು, ಕಡಿಮೆ ಮಾಡುತ್ತಿದ್ದಾರೆ. ಇತರ ವಿಶ್ವವಿದ್ಯಾಲಯಗಳಲ್ಲೂ ಇಂತಹ ಪ್ರಕರಣಗಳು ನಡೆದಿರಬಹುದು’ ಎಂದು ಆತಂಕ ವ್ಯಕ್ತಪಡಿಸಿದ್ದರು..

‘ಬಾರಪೇಟದಲ್ಲಿ ಈ ರೀತಿಯ 6–7 ಪ್ರಕರಣಗಳು ಬೆಳಕಿಗೆ ಬಂದಿವೆ. ಪೊಲೀಸ್‌ ಇಲಾಖೆ ಮತ್ತು ಸಿಐಡಿ ಪ್ರಕರಣದ ತನಿಖೆ ನಡೆಸುತ್ತಿದೆ. ಗಣಕೀಕೃತ ಅಂಕಪಟ್ಟಿ ವ್ಯವಸ್ಥೆಯ ಉಸ್ತುವಾರಿ ನೋಡುಕೊಳ್ಳುತ್ತಿದ್ದ ವ್ಯಕ್ತಿ ಪ್ರಮುಖ ಆರೋಪಿಯಾಗಿದ್ದು, ಆತನನ್ನು ಬಂಧಿಸಲಾಗಿದೆ’ ಎಂದು ತಿಳಿಸಿದ್ದಾರೆ. 

ಬಾರಪೇಟದ ಗಣೇಶ್‌ ಲಾಲ್‌ ಚೌಧರಿ ಕಾಲೇಜಿನ ಅಧಿಕಾರಿಗಳು ವಿದ್ಯಾರ್ಥಿಯೊಬ್ಬನ ಅಂಕಗಳಲ್ಲಿ ವ್ಯತ್ಯಾಸವಿರುವುದನ್ನು ಗಮನಿಸಿದ ಬಳಿಕ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಆ ವಿದ್ಯಾರ್ಥಿಯನ್ನೂ ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT