ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

NITI Aayog Meeting: ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ದೆಹಲಿ ಪ್ರಯಾಣ ವಿಳಂಬ

Published : 25 ಜುಲೈ 2024, 9:08 IST
Last Updated : 25 ಜುಲೈ 2024, 9:08 IST
ಫಾಲೋ ಮಾಡಿ
Comments

ಕೋಲ್ಕತ್ತ: ದೆಹಲಿಯಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಪಾಲೊಳ್ಳಲು ಇಂದು ರಾಷ್ಟ್ರ ರಾಜಧಾನಿಗೆ ಹೊರಡಬೇಕಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪ್ರಯಾಣ ಒಂದು ದಿನ ವಿಳಂಬವಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲಗಳು ತಿಳಿಸಿವೆ.

ಜುಲೈ 27ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಆಡಳಿತ ಮಂಡಳಿ ಸಭೆ ನಡೆಯಲಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದೆಹಲಿಗೆ ಇಂದು ಹೊರಡಬೇಕಿತ್ತು. ಆದರೆ ಪ್ರಯಾಣವನ್ನು ಒಂದು ದಿನ ಮುಂದೂಡಲು ನಿರ್ಧರಿಸಿದ್ದಾರೆ ಎಂದು ಟಿಎಂಸಿ ಮೂಲಗಳು ತಿಳಿಸಿವೆ.

ಕೇಂದ್ರ ಸರ್ಕಾರವು 'ಇಂಡಿಯಾ' ಒಕ್ಕೂಟದ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳನ್ನು ಬಜೆಟ್‌ನಲ್ಲಿ ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ನಿಲುವನ್ನು ಖಂಡಿಸಿ ಇದೇ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಆದರೆ ಮಮತಾ ಬ್ಯಾನರ್ಜಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.

ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸುವುದಾಗಿ ಈಗಾಗಲೇ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮಿಳುನಾಡಿನ ಎಂ.ಕೆ.ಸ್ಟಾಲಿನ್‌, ಹಿಮಾಚಲ ಪ್ರದೇಶದ ಸುಖವೀಂದರ್‌ ಸಿಂಗ್‌ ಸುಖು ಮತ್ತು ತೆಲಂಗಾಣದ ಎ.ರೇವಂತ್‌ ರೆಡ್ಡಿ ಘೋಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT