ನವದೆಹಲಿ: ಇಲ್ಲಿನ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿರುವನೀತಿ ಆಯೋಗದ ಸಭೆಗೆ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೈರಾಗಲಿದ್ದಾರೆ.

ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್, ಕೇಂದ್ರ ಸಚಿವರು ಮತ್ತು ವಿವಿಧ ಕ್ಷೇತ್ರಗಳ ತಜ್ಞರಿಗೆನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರುನೀತಿ ಆಯೋಗ ಸಭೆಯಲ್ಲಿ ತಾನು ಭಾಗವಹಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಕೂಡ ನೀತಿ ಆಯೋಗದ ಸಭೆಗೆ ಗೈರಾಗಲಿದ್ದಾರೆ ಎನ್ನಲಾಗಿದೆ.

ಮೋದಿ ನೇತೃತ್ವದಲ್ಲಿ ಇಡೀ ದಿನ ಸಭೆ ನಡೆಯಲಿದೆ. ಕರ್ನಾಟಕದಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯಗಳಿಗೆ ನೀಡುವ ಹಣಕಾಸಿನ ಕುರಿತು ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ನೀತಿ ಆಯೋಗಕ್ಕೆ ಇಲ್ಲ. ಕೇವಲ ಸಲಹೆ ನೀಡಬಹುದು ಅಷ್ಟೆ. ಇದರಿಂದ ಪ್ರಯೋಜನವಿಲ್ಲ. ಇದರಿಂದಾಗಿ ತಾನು ಪಾಲ್ಗೊಳ್ಳುವುದಿಲ್ಲ. ನಾಲ್ಕೂವರೆ ವರ್ಷದಿಂದ ನೀತಿ ಆಯೋಗದ ಕಾರ್ಯಕ್ರಮಗಳಿಂದ ಯಾವುದೇ ಪ್ರಯೋಜನವಾಗಿಲ್ಲ. ಆಯೋಗದ ಅಧಿಕಾರಿಗಳು ಕೇವಲ ಸಾರ್ವಜನಿಕವಾಗಿ ಹೇಳಿಕೆ ಕೊಡಲು ಮಾತ್ರ ಸಾಕು, ಇದರಿಂದ ರಾಜ್ಯಗಳಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಮಮತಾ ಬ್ಯಾನರ್ಜಿ ಪತ್ರದಲ್ಲಿ ತಿಳಿಸಿದ್ದಾರೆ.

ನೀತಿ ಆಯೋಗ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಸಭೆ ಸೇರಲಿದೆ. ಐದನೆ ಸಭೆ ಇದಾಗಿದ್ದು, ಕಳೆದ ಆಡಳಿತದ ಅವಧಿಯಲ್ಲಿ ನಾಲ್ಕು ಸಭೆಗಳನ್ನು ನಡೆಸಿತ್ತು. ನಾಲ್ಕನೇ ಸಭೆಯಲ್ಲಿ ಮಮತಾ ಬ್ಯಾನರ್ಜಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.