ಪಟ್ನಾ: ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಜೆಪಿಯ ಬೆಂಬಲದ ಪತ್ರವನ್ನು ನಿತೀಶ್ ಕುಮಾರ್, ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ ಎಂದು ಎಎನ್ಐ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.

ನಿತೀಶ್ ಕುಮಾರ್ ಅವರ ಪತ್ರವನ್ನು ರಾಜ್ಯಪಾಲರು ಅಂಗೀಕರಿಸಿದ್ದು, ಇಂದೇ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಮತ್ತು ಬಿಜೆಪಿಯಿಂದ ಇಬ್ಬರು ಉಪಮುಖ್ಯಮಂತ್ರಿಗಳು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದೂ ಮೂಲಗಳನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ. ಸಂಜೆ 5 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

ಬಿಜೆಪಿಯ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಅದು ಹೇಳಿದೆ.

ಬೆಳಿಗ್ಗೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಜೆಡಿಯು ಮತ್ತು ಎನ್ಡಿಎ ಬಣದ ಇತರೆ ಪಕ್ಷಗಳ ಜೊತೆ ಸೇರಿ ಸರ್ಕಾರ ರಚಿಸುವ ನಿರ್ಣಯ ಕೈಗೊಳ್ಳಲಾಗಿತ್ತು.

ಇದಕ್ಕೂ ಮುನ್ನ, ಜೆಡಿಯು ಶಾಸಕರ ಸಭೆ ನಡೆಸಿದ ನಿತೀಶ್ ಕುಮಾರ್ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದರು.

ಮಹಾಘಟಬಂಧನ ಮತ್ತು ಇಂಡಿಯಾ ಬಣದಲ್ಲಿ ಎಲ್ಲವೂ ಸರಿಯಿಲ್ಲದ ಕಾರಣ ಈ ಪರಿಸ್ಥಿತಿ ಬಂದಿದೆ. ಎಲ್ಲರಿಂದಲೂ ಅಭಿಪ್ರಾಯಗಳನ್ನು ಪಡೆದಿದ್ದೇನೆ. ಆ ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿದ್ದೇನೆ. ಇಂದು ಸರ್ಕಾರ ವಿಸರ್ಜನೆಯಾಗಿದೆ ಎಂದು ರಾಜಭವನದ ಹೊರಗೆ ನಿತೀಶ್ ಕುಮಾರ್ ಸುದ್ದಿಗಾರರರಿಗೆ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.