ಚೆನ್ನೈ: ‘2026ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ತಮಿಳುನಾಡಿನ ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ ಸ್ಪಷ್ಟಪಡಿಸಿದೆ.

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ‘ಜನ ವಿರೋಧಿ ಮತ್ತು ಭ್ರಷ್ಟ ಡಿಎಂಕೆ ಸರ್ಕಾರವನ್ನು ಸೋಲಿಸಲು ‘ಸಮಾನ ಮನಸ್ಕ’ ಪಕ್ಷಗಳೊಂದಿಗೆ ಕೈಜೋಡಿಸಲು ನಾವು ಸಿದ್ಧರಿದ್ದೇವೆ’ ಎಂದು ಹೇಳಿದ್ದರು. ಇದು ಬಿಜೆಪಿಯೊಂದಿಗೆ ಪಕ್ಷದ ಮೈತ್ರಿ ಕುರಿತು ಊಹಾಪೋಹಗಳಿಗೆ ಕಾರಣವಾಗಿತ್ತು.

ಈ ಕುರಿತು ಸ್ಪಷ್ಟನೆ ನೀಡಿರುವ ಎಐಎಡಿಎಂಕೆ ಸಂಘಟನಾ ಕಾರ್ಯದರ್ಶಿ ಡಿ ಜಯಕುಮಾರ್ ‘2026ರ ಚುನಾವಣೆ ಅಥವಾ ಇನ್ನಾವುದೇ ಚುನಾವಣೆಗೂ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಎನ್ಡಿಎಯಿಂದ ಹೊರನಡೆದಿರುವ ಹಾಗೂ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳದೇ ಇರುವ ಪಕ್ಷದ ನಿರ್ಧಾರದಲ್ಲಿ ಬದಲಾವಣೆ ಇಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.